ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಅಂಡ್ ಗ್ಯಾಂಗ್‌ ಮತ್ತೆ 14 ದಿನ ಸೆಂಟಲ್ ಜೈಲೇ ಗತಿ!

: ಪ್ರೇಯಸಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಅಮಾನುಷವಾಗಿ ಹತ್ಯೆ ಮಾಡಿದ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೆ 14 ದಿನಗಳ(ಜು.18) ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

Renuka swamy murder case why court extended karnnada actor darshan judicial custody agains here 15 reasons rav

ಬೆಂಗಳೂರು (ಜು.4): ಪ್ರೇಯಸಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಅಮಾನುಷವಾಗಿ ಹತ್ಯೆ ಮಾಡಿದ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೆ 14 ದಿನಗಳ(ಜು.18) ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ 14 ದಿನವಾಗಿದ್ದು, ಇಂದು ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. 

ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ನೀಡಿದ ಕಾರಣಗಳೇನು?

1) ಪ್ರಕರಣದ ಎ1 ರಿಂದ ಎ17 ಆರೋಪಿಗಳು ಕೊಲೆ ಮತ್ತು ಸಾಕ್ಷಿನಾಶಪಡಿಸಿದಂತೆ ಒಂದು ಗಂಭೀರ ಪ್ರಕರಣದಲ್ಲಿ ಭಾಗಿಯಾಗಿ ಕೃತ್ಯ ವೆಸಗಿದ್ದು ಇವರುಗಳಿಗೆ ಕಾನೂನಿನ ಮೇಲೆ ಕಿಂಚಿತ್ ಗೌರವ ಇಲ್ಲದೇ ಇರುವುದು ಈವರೆಗಿನ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.

2) ಎಲ್ಲಾ ಎ1 ರಿಂದ ಎ17 ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ವೆಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

ದರ್ಶನ್‌ಗೆ ನಾನು ಮದರ್ ಇಂಡಿಯಾ, ಕೊಲೆ ಮಾಡೋ ವ್ಯಕ್ತಿ ಅವನಲ್ಲ: ಮೌನ ಮುರಿದ ಸುಮಲತಾ!

3) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

4) ಪ್ರಕರಣವು ಹಾಲಿ ತನಿಖೆಯಲ್ಲಿದ್ದು ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಕೃತ್ಯದಲ್ಲಿನ ಅವರ ಸಂಪೂರ್ಣ ಪಾತ್ರದ ಬಗ್ಗೆ ಹೆಚ್ಚಿನ ವಿಷಯಗಳನ್ನು ತಿಳಿಯಬೇಕಾಗಿದ್ದು ಈಬಗ್ಗೆ ತನಿಖೆ ಮುಂದುವರೆದಿರುತ್ತದೆ. 5) ಪ್ರಕರಣದಲ್ಲಿ ಈವರೆಗೆ 83.65.500/- ರೂಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು ಸದರಿ ಹಣವನ್ನು ಆರೋಪಿಗಳಿಗೆ ನೀಡಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.

6) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

7) ಪ್ರತ್ಯಕ್ಷ ಸಾಕ್ಷಿದಾರರಿಂದ ಎ1, ಎ-15 ಹಾಗೂ ಎ17 ಆರೋಪಿಗಳು ಸೇರಿದಂತೆ ಇತರೆ ಆರೋಪಿಗಳ ಗುರುತಿನ ಕವಾಯತನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಂದ ನಡೆಸಬೇಕಾಗಿರುತ್ತದೆ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡದಲ್ಲಿ ಪ್ರಕರಣದ ತನಿಖೆಗೆ ಆಡಚಣೆ ಉಂಟಾಗುತ್ತದೆ.

8) ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಹಾಗೂ ಸಾಕ್ಷ್ಯ ನಾಶಕ್ಕೆ ಉಪಯೋಗಿಸಿದ್ದ ಮತ್ತು ಮೃತದೇಹವನ್ನು ವಿಲೇವಾರಿ ಮಾಡಲು ಉಪಯೋಗಿಸಿದ್ದ ವಾಹನಗಳನ್ನು ಆರ್.ಟಿ.ಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಪರಿಶೀಲನಾ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ವಾಹನ ಮಾಲೀಕರುಗಳ ವಿವರಗಳನ್ನು ಪಡೆದುಕೊಂಡು ಮೂಲ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.

9) ಪ್ರಕರಣದಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್‌ಗಳನ್ನು ರಿಟ್ರೇವ್ ಮಾಡಿಸಿ ಸಿ.ಎಪ್.ಎಸ್.ಎಲ್ ಹೈದ್ರಾಬಾದ್‌ಗೆ ಕಳುಹಿಸಿಕೊಟ್ಟಿದ್ದು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

10) ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಹಾಗೂ ಸಾಕ್ಷಿದಾರರುಗಳ ಮೊಬೈಲ್ ಪೋನ್ಗಳನ್ನು ರಿಟ್ರೇವ್ ಮಾಡಿಸಿ ಪರೀಕ್ಷೆಗಾಗಿ ಸಿ.ಎಪ್.ಎಸ್.ಎಲ್ ಗೆ ಕಳುಹಿಸಿಕೊಟ್ಟು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. 

11) ಪ್ರಕರಣದಲ್ಲಿ ಅಮಾನತ್ತು ಪಡಿಸಿದ್ದ ಡಿ.ವಿ.ಆರ್‌ಗಳನ್ನು ರಿಟ್ರೇವ್ ಮಾಡಿಸಿ ನಂತರ ಆರೋಪಿಗಳ ನೇರವಾಗಿ ಕೃತ್ಯದಲ್ಲಿ ಬಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಎಪ್.ಎಸ್.ಎಲ್ ಗೆ ಕಳುಹಿಸಿ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

12) ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಮೊದಲು ಹಾಗೂ ಕೃತ್ಯದ ಸಮಯದಲ್ಲಿ ಹಾಗೂ ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಸದರಿ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಸಾಕ್ಷ್ಯ ನಾಶದ ಬಗ್ಗೆ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷ್ಯ, ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ. .

13) ಪ್ರಕರಣದ ಆರೋಪಿಗಳು ಪ್ರಭಾವಿಗಳು ಹಾಗೂ ಹಣಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದು ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ತಮ್ಮ ಪ್ರಭಾವಗಳನ್ನು ಬಳಸಿ ಪ್ರಕರಣದ ಸಾಕ್ಷಿದಾರರುಗಳಿಗೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

14) ಪ್ರಕರಣದಲ್ಲಿ ಕೆಲವು ಆರೋಪಿಗಳು ಬೇರೆಯವರ ಹೆಸರಿನಲ್ಲಿರುವ ಸಿಮ್ ಗಳನ್ನು ಉಪಯೋಗಿಸುತ್ತಿರುವುದು ಹಾಗೂ ಸಾಕ್ಷಿದಾರರುಗಳು ಸಹ ಬೇರೆಯವರ ಹೆಸರಿನಲ್ಲಿರುವ ಸಿಮ್ ಗಳನ್ನು ಉಪಯೋಗಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದ್ದು ಮೂಲ ಸಿಮ್ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.

ದರ್ಶನ್ ಭೇಟಿಗೆ ಹುಬ್ಬಳ್ಳಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಬಂದ ಅಜ್ಜಿ!

15) ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ ಕಲಂ 164 ಆಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು ಪ್ರಕರಣವು ತನಿಖಾ ಹಂತದಲ್ಲಿರುವುದರಿಂದ ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡಿದಲ್ಲಿ ಪ್ರಕರಣದ ತನಿಖೆಗೆ ಹಿನ್ನಡೆಯಾಗುವ ಹಾಗೂ ಆರೋಪಿಗಳು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

Latest Videos
Follow Us:
Download App:
  • android
  • ios