ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ವಿಚಾರಣೆ ವಿಳಂಬವನ್ನು ಕಾರಣವಾಗಿಟ್ಟುಕೊಂಡು ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ಪೊಲೀಸರು ಅಫಿಡವಿಟ್ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ.

ಬೆಂಗಳೂರು (ಮೇ.14): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್‌ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ. ಸೆಷನ್ಸ್ ಕೋರ್ಟ್‌ನಲ್ಲಿ ಕೇಸ್‌ ವಿಚಾರಣೆ ವಿಳಂಬವಾಗುತ್ತಿದೆ. 273 ಸಾಕ್ಷ್ಯಗಳ ಪೈಕಿ ಈತನಕ 10 ಮಂದಿಯ ವಿಚಾರಣೆಯನ್ನೂ ಮುಗಿಸಿಲ್ಲ. ತಾವು ಜೈಲು ಸೇರಿ ಈಗಾಗಲೇ 8 ತಿಂಗಳು ಆಗಿದೆ. 

Add Asianetnews Kannada as a Preferred SourcegooglePreferred

ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿ ಪೀಠದ ಮುಂದೆ ದರ್ಶನ್‌ ಮನವಿ ಸಲ್ಲಿಸಿದ್ದಾರೆ. ಇನ್ನು, ಸುಪ್ರೀಂ ಕೋರ್ಟ್‌ಗೆ ಬೆಂಗಳೂರು ಪೊಲೀಸರು ಎರಡು ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಪ್ರಕರಣದ ವಿಚಾರಣೆ ವಿಳಂಬ ಯಾರಿಂದಾಯ್ತು? ಎಂಬ ಬಗ್ಗೆ ಉಲ್ಲೇಖಿಸಿದ್ದಾರೆ. ಜತೆಗೆ ಜೈಲಿನಲ್ಲಿ ಕನಿಷ್ಠ ಮಟ್ಟದ ಸೌಲಭ್ಯವೂ ನೀಡುತ್ತಿಲ್ಲ ಎಂಬ ದರ್ಶನ್‌ ಆರೋಪದ ಕುರಿತೂ ಪೊಲೀಸರು ಅಫಿಡವಿಟ್‌ನಲ್ಲಿ ಮಾಹಿತಿ ತಿಳಿಸಿದ್ದಾರೆ.

ಕಳೆದ ವಾರವೇ ದರ್ಶನ್‌ ಅರ್ಜಿ ಸಲ್ಲಿಸಿದ್ದು, ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತ್ತು. ಈ ಸಂಬಂಧ ಸೆಷನ್ಸ್ ನ್ಯಾಯಾಲಯ, ಕಾರಾಗೃಹ ಇಲಾಖೆಗೆ ನೊಟೀಸ್ ನೀಡಿ, ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ

ಅಲ್ಲದೆ, ಕೊರಂಟೈನ್ ಸೆಲ್ ನಲ್ಲಿ ತನ್ನನ್ನು ಇಟ್ಟಿದ್ದು, ಕನಿಷ್ಟ ಮಟ್ಟದ ಸೌಲಭ್ಯ ನೀಡಿಲ್ಲ ಎಂದು ದರ್ಶನ್ ಆರೋಪಿಸಿದ್ದು, ಈ ಬಗ್ಗೆಯೂ ಜೈಲು ಅಧಿಕಾರಿಗಳು ಅಫಿಡವಿಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ವಿಚಾರಣೆ ಶುಕ್ರವಾರಕ್ಕೆ ನಿಗದಿಯಾಗಿದೆ,

- ಸಾಕ್ಷಿಗಳ ವಿಚಾರಣೆಯಲ್ಲಿ ವಿಳಂಬ ನೆಪವೊಡ್ಡಿ ಜಾಮೀನಿಗೆ ಮನವಿ