ನೇಹಾ ಕೇಸ್‌ಗೆ ವಿಶೇಷ ಕೋರ್ಟ್ ತೆರೆಯಲು ಸಿಜೆಗೆ ಮೊರೆ: ಸಚಿವ ಎಚ್.ಕೆ. ಪಾಟೀಲ್
ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದೆ. ನೇಹಾ, ಅಂಜಲಿ ಹತ್ಯೆ ಪ್ರಕರಣ ನಡೆದಿರುವುದು ವಿಷಾದನೀಯ. ಇಂತಹ ಘಟನೆಗಳು ಆಗಬಾರದು. ಗೃಹ ಸಚಿವರು ಈ ಹತ್ಯೆ ಪ್ರಕರಣಗಳ ಕುರಿತಂತೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದಾರೆ. ವಿಕೃತ ಮನಸ್ಸಿನ ವ್ಯಕ್ತಿಗಳು ಕೊಲೆ ಮಾಡುತ್ತಿದ್ದಾರೆ. ಅಂಥವರಿಗೆ ಲಗಾಮು ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು(ಮೇ.18): ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದೆ. ನೇಹಾ, ಅಂಜಲಿ ಹತ್ಯೆ ಪ್ರಕರಣ ನಡೆದಿರುವುದು ವಿಷಾದನೀಯ. ಇಂತಹ ಘಟನೆಗಳು ಆಗಬಾರದು. ಗೃಹ ಸಚಿವರು ಈ ಹತ್ಯೆ ಪ್ರಕರಣಗಳ ಕುರಿತಂತೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದಾರೆ. ವಿಕೃತ ಮನಸ್ಸಿನ ವ್ಯಕ್ತಿಗಳು ಕೊಲೆ ಮಾಡುತ್ತಿದ್ದಾರೆ. ಅಂಥವರಿಗೆ ಲಗಾಮು ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದು, ವಿರೋಧ ಪಕ್ಷಗಳ ಆರೋಪ ಸರಿಯಲ್ಲ ಎಂದರು.
ಹುಬ್ಬಳ್ಳಿ ಕೊಲೆಗಳ ಬಗ್ಗೆ ವರದಿ ಕೇಳಿದ್ದೇನೆ: ಗೃಹ ಸಚಿವ ಪರಮೇಶ್ವರ್
ನೇಹಾ ಹತ್ಯೆ ಪ್ರಕರಣ ತ್ವರಿತ ಇತ್ಯರ್ಥಕ್ಕಾಗಿ ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಅದರ ಜತೆಗೆ ಅಂಜಲಿ ಹತ್ಯೆ ಪ್ರಕರಣವನ್ನೂ ವಿಶೇಷ ನ್ಯಾಯಾಲಯ ವ್ಯಾಪ್ತಿಗೆ ತರುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.