Asianet Suvarna News Asianet Suvarna News

ಬರ ಪರಿಹಾರಕ್ಕೆ ಸಹಕರಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ: ಡಿಕೆಶಿ

ಬಿಜೆಪಿಯವರು ಈವರೆಗೆ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದು ವಿಳಂಬವಾಗಿದೆ ಎಂದು ಸುಳ್ಳು ಹೇಳುತ್ತಿದ್ದರು. ಇದೀಗ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಬರ ಪರಿಹಾರ ವಿಳಂಬವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾ‌ರ್

Request to the Election Commission to Cooperate in Drought Compensation Says DK Shivakumar grg
Author
First Published Apr 9, 2024, 12:15 PM IST

ಬೆಂಗಳೂರು(ಏ.09):  ಕೇಂದ್ರ ಸರ್ಕಾರ ಬರ ಪರಿಹಾರ ನೀಡದೆ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಿದೆ. ಬರ ಪರಿಹಾರ ವಿಳಂಬದ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಕೂಡ ಒಪ್ಪಿದ್ದಾರೆ. ಬರ ಪರಿಹಾರಕ್ಕಾಗಿ ನಾವು ಕೋರ್ಟ್‌ಗೆ ಹೋಗಿದ್ದು, ಚುನಾವಣಾ ಆಯೋಗವೂ ಸಹಕರಿಸುವಂತೆ ಮನವಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಹೇಳಿದ್ದಾರೆ.

ಕೇಂದ್ರ ಬರ ಪರಿಹಾರದ ವಿಳಂಬದ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಈವರೆಗೆ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದು ವಿಳಂಬವಾಗಿದೆ ಎಂದು ಸುಳ್ಳು ಹೇಳುತ್ತಿದ್ದರು. ಇದೀಗ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಬರ ಪರಿಹಾರ ವಿಳಂಬವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ರಾಹುಲ್, ಪ್ರಿಯಾಂಕ ಪ್ರಚಾರ: 

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರಾ ಎಂಬ ಪ್ರಶ್ನೆಗೆ, ಅವರು ಒಂದೆರಡು ದಿನಾಂಕಗಳನ್ನು ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೂ ಒಂದೆರಡು ದಿನ ರಾಜ್ಯದಲ್ಲಿ ಪ್ರಚಾರ ಮಾಡುವಂತೆ ಮನವಿ ಮಾಡಿ ದ್ದೇವೆ. ಉತ್ತರ ಭಾರತದಲ್ಲಿ ಖರ್ಗೆ ಅವರಿಗೆ ಬಹಳ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಾವು ಇವರ ಪ್ರವಾಸದ ಕುರಿತ ದಿನಾಂಕ ಬಿಡುಗಡೆ ಮಾಡು ತ್ತೇವೆ ಎಂದಷ್ಟೇ ಡಿ.ಕೆ. ಶಿವಕುಮಾರ್ ಹೇಳಿದರು.

ಮುಂದಿನ ಸಿಎಂ ಎಂದವರ ಬಾಯಿ ಮುಚ್ಚಿಸಿದ ಡಿಕೆಶಿ: 

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾಠ್ಯಕ್ರಮ ವೇಳೆ ಕಾರ್ಯಕರ್ತರೊಬ್ಬರು 'ಮುಂದಿನ ಸಿಎಂ ಡಿ.ಕೆ ಶಿವಕುಮಾರ್‌ಗೆ ಜೈ' ಎಂದು ಘೋಷಣೆ ಕೂಗಿದರು. ಈ ವೇಳೆ ಅವರ ತಕ್ಷಣ ಬಾಯಿ ಮುಚ್ಚಿಸಿದ ಡಿ.ಕೆ.ಶಿವಕುಮಾ‌ರ್, ಆಗಲೇ ದೇವರು ಬಂದವನ ತರಾ ಆಡ್ತಿದಾನೆ ಎಂದು ಹಾಸ್ಯ ಮಾಡಿದರು.

Follow Us:
Download App:
  • android
  • ios