ಬೆಂಗಳೂರು (ನ.16) : ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲ ನಿಮಿಷ ಚರ್ಚೆ ನಡೆಸಿದ್ದು ಕುತೂಹಲ ಕೆರಳಿಸಿದೆ. 

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ಸಚಿವ ರಾಮುಲು ಅವರು ದೀಪಾವಳಿ ಹಬ್ಬದ ಶುಭಾಶಯ ಕೋರಿದರು. 

ಇದೇ ವೇಳೆ, ಪರಿಶಿಷ್ಟಪಂಗಡದ (ಎಸ್‌ಟಿ) ಸಮುದಾಯಗಳಿಗೆ ಇರುವ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಯ ಕುರಿತೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಮತ್ತೊಂದು ಉಪಚುನಾವಣೆ : ಬಿಜೆಪಿ ಅಭ್ಯರ್ಥಿಯೂ ಫಿಕ್ಸ್ ...

ಕೆಲ ದಿನಗಳ ಹಿಂದಷ್ಟೇ ಶ್ರೀ ರಾಮುಲು ಬಳಿ ಇದ್ದ ಆರೋಗ್ಯ ಖಾತೆ ಜವಾಬ್ದಾರಿಯನ್ನು ಸುಧಾಕರ್‌ಗೆ ವಹಿಸಲಾಗಿತ್ತು.