ಎಸಿಬಿ ರದ್ದತಿ ತೀರ್ಪು ನೀಡಿದ್ದ ನ್ಯಾ. ವೀರಪ್ಪ ಕರ್ನಾಟಕ ಉಪಲೋಕಾಯುಕ್ತ?
ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುತ್ತಿದ್ದಾರೆ.
ಬೆಂಗಳೂರು(ಜೂ.25): ಕರ್ನಾಟಕ ಉಪ ಲೋಕಾಯುಕ್ತ - 2 ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುತ್ತಿದ್ದಾರೆ.
ಬೆಂಗಳೂರು: ಆದಾಯ ಮೀರಿ ಶೇ.488% ಆಸ್ತಿ ಕೇಸ್ ರದ್ದತಿಗೆ ಒಪ್ಪದ ಕೋರ್ಟ್
ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಖಾಲಿ ಇದ್ದ ಉಪ ಲೋಕಾಯುಕ್ತ-2 ಹುದ್ದೆಗೆ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಕುಮಾರಕೃಪಾ ಅತಿಥಿಗೃಹದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಇತರರಿದ್ದರು.