PC ಜಾಬಿನ ಕಾಲೇಜಿನ ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. G.B. ಕಲಕೋಟಿ ಅವರು ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಾವೇರಿ ತಾಲೂಕಿನ ಅವರ ಸ್ವಗ್ರಾಮ ಕೊರಟೂರಿನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರು: ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ನಿವಾಸಿ ಹಾಗೂ ಹುಬ್ಬಳ್ಳಿ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ ಕಾಲೇಜಿನ ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಬಿ. ಕಲಕೋಟಿ (71) ಬುಧವಾರ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಜೂ. 4ರಂದು ಬೆಳಗ್ಗೆ 5ಕ್ಕೆ ಹುಬ್ಬಳ್ಳಿಯ ಚಂದ್ರಗಿರಿ ಲೇಔಟ್‌ನಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಆನಂತರ ಬೆಳಗ್ಗೆ 9ಕ್ಕೆ ಹಾವೇರಿ ತಾಲೂಕು ಕೊರಡೂರಿನ ಸ್ವಗ್ರಾಮಕ್ಕೆ ಕರೆತರಲಾಗುವುದು. ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 1980ರಲ್ಲಿ ಸೇವೆಗೆ ಸೇರಿದ್ದರು. 2015 ಡಿ. 31ರಂದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಇದನ್ನೂ ಓದಿ: ಡಿಕೆ ಶಿವಕುಮಾರ್ ಸಂಪುಟದ ಮೊದಲ ಹೆಜ್ಜೆ: 13 ಸಚಿವರು, 14 ಘಟಾನುಘಟಿ ನಾಯಕರಿಗೆ ನಿರಾಸೆ?
ಇದನ್ನೂ ಓದಿ: ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಾಧ್ಯತೆ! ಡಿಕೆಶಿ ಹಿಂದೆ ಮಾತು ಕೊಟ್ಟಿದ್ದೇನು?
