ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರೆಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ನಿವೃತ್ತ ಸೈನಿಕರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದು, ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.

ಬೆಂಗಳೂರು (ಡಿ.7) :  ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರೆಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ನಿವೃತ್ತ ಸೈನಿಕರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದು, ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.

ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಬುಧವಾರ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದು, ಅರ್ಜಿಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕೇಂದ್ರ ಚುನಾವಣಾ ಆಯೋಗ, ಬಿಜೆಪಿ, ಕಾಂಗ್ರೆಸ್ ಮತ್ತಿತರ ಪ್ರಮುಖ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಪಕ್ಷಗಳು ಅಧಿಕಾರ ಹಿಡಿಯಲು ಮತದಾರರಿಗೆ ಆಮಿಷ ಒಡ್ಡುತ್ತಿವೆ. ಇಂತಹ ರಾಜಕೀಯ ಅಭ್ಯರ್ಥಿಗಳು ಮತ್ತು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಬಿಜೆಪಿಯಿಂದ ಜಾತಿ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

ಜನರ ತೆರಿಗೆ ಹಣವನ್ನು ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಬೊಕ್ಕಸದ ಹಣ ಬಳಸುವ ಬದಲು ಆಮಿಷಕ್ಕೆ ಬಳಕೆ ಮಾಡಲಾಗುತ್ತಿದೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹಾಗಾಗಿ ಸೂಕ್ತ ಮಾರ್ಗಸೂಚಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪಂಚರಾಜ್ಯ ಚುನಾವಣಾ ಫಲಿತಾಂಶ ಎಫೆಕ್ಟ್; ಕೈಗೆ ಶಾಸಕರ ಸಂಭಾಳಿಸುವ ಸವಾಲ್‌