Asianet Suvarna News Asianet Suvarna News

Minister R Ashoka Covid positive: ಸಚಿವ ಆರ್ ಅಶೋಕ್ ಗೆ ಕೊರೊನಾ ದೃಢ, ಆಸ್ಪತ್ರೆಗೆ ದಾಖಲು

ಕಂದಾಯ ಸಚಿವ ಆರ್ ಅಶೋಕ್‌ಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Revenue minister R Ashoka tested corona positive gow
Author
Bengaluru, First Published Jan 7, 2022, 2:57 PM IST

ಬೆಂಗಳೂರು(ಜ.7): ಕಂದಾಯ ಸಚಿವ ಆರ್ ಅಶೋಕ್‌ಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಜ್ವರ, ಶೀತ ಸುಸ್ತಿನಿಂದ ಬಳಲುತ್ತಿರುವ ಅಶೋಕ್  ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು "ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ. ಜನವರಿ 6ರ ಗುರುವಾರ ನಡೆದ  ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೊನಾ ಪಾಸಿಟಿವ್​ ಕಂಡು ಬಂದಿತ್ತು. ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ನಿಯಂತ್ರಿಸಲು ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದು, ಶುಕ್ರವಾರ ರಾತ್ರಿ 10ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೂ ಕರ್ಫ್ಯೂ ಘೋಷಿಸಿದೆ. 

ಜನ ಸಾಮಾನ್ಯರಿಗೆ ಕೊರೊನಾ ಬಂದರೆ ಪ್ರಾಥಮಿಕ ದ್ವಿತೀಯ ಸಂಪರ್ಕಿತರಿಗೆ ಏಳು ದಿನ ಕ್ವಾರಂಟೈನ್ ಮತ್ತು ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ಅಶೋಕ್ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಸಿಎಂ ಮತ್ತು ಇನ್ನಿತರ ಸದಸ್ಯರಿಗೆ ಕ್ವಾರಂಟೈನ್ ಇದೆಯೋ ಇಲ್ಲವೋ ನೋಡಬೇಕಿದೆ.

"

Covid 19 Crisis: ಕೊರೋನಾ ಚಿಕಿತ್ಸೆಗೆ ಇಎಸ್‌ಐ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ: ಹೆಬ್ಬಾರ್‌

ಕರ್ನಾಟಕದಲ್ಲಿ ಕೊರೊನಾ (Corona) ಹಾಗೂ ಒಮಿಕ್ರಾನ್ (Omicron) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರ 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ಬೆಂಗಳೂರಿನಲ್ಲಿ ಅತೀ ಹೆಚ್ಚು ಅಂದರೆ 4,324 ಪ್ರಕರಣ ವರದಿಯಾಗಿತ್ತು. ಜೊತೆಗೆ ಗುರುವಾರ 107 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ  7 ತಿಂಗಳ ನಂತರ ಕೊರೊನಾ ಪ್ರಕರಣಗಳು 1 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳ ಅಂಕಿ ಅಂಶಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ್ದು, ದಿನವೊಂದರಲ್ಲಿ 1,17,100 ಪ್ರಕರಣ ವರದಿಯಾಗಿದೆ. 302 ರೋಗಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,007ಕ್ಕೆ ಏರಿಕೆಯಾಗಿದೆ.

ಶುಕ್ರವಾರ ರಾತ್ರಿ 10ರಿಂದ 55ತಾಸು Weekend Curfew: ಯಾರಿಗೆಲ್ಲ ವಿನಾಯ್ತಿ? ಇಲ್ಲಿದೆ ಮಾಹಿತಿ!

ಶುಕ್ರವಾರ ರಾತ್ರಿ 10ರಿಂದ 55ತಾಸು Weekend Curfew: ರಾಜ್ಯದಲ್ಲಿ ಐದೂವರೆ ತಿಂಗಳ ಬಳಿಕ ಮತ್ತೆ ವಾರಾಂತ್ಯದ ಕರ್ಫ್ಯೂ (Weekend Curfew) ಜಾರಿಯಾಗುತ್ತಿದೆ. ಜ.7ರ ಶುಕ್ರವಾರ ರಾತ್ರಿ 10ರಿಂದ ಜ. 10ರ ಸೋಮವಾರ ಬೆಳಿಗ್ಗೆ 5ರವರೆಗೂ ರಾಜ್ಯಾದ್ಯಂತ ಕರ್ಫ್ಯೂ ಇರಲಿದ್ದು, ತುರ್ತು ಸೇವೆಗಳಿಗೆ (Emergency Service) ಮಾತ್ರ ಅನುಮತಿ ನೀಡಲಾಗಿದೆ.ಕೊರೋನಾ ಸೋಂಕು (Covid 19) ಹತೋಟಿಗೆ ಸರ್ಕಾರ ಡಿ.28ರಿಂದ 19ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಆದರೆ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದಂತೆ ಇನ್ನಷ್ಟುಕಠಿಣ ಕ್ರಮ ಕೈಗೊಂಡಿದೆ. ಜ.19ವರೆಗೂ ನಿತ್ಯ ರಾತ್ರಿ ಕರ್ಫ್ಯೂ ಮತ್ತು ಮುಂದಿನ ಎರಡು ವಾರಾಂತ್ಯಗಳಲ್ಲಿ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರಲಿದೆ.

Follow Us:
Download App:
  • android
  • ios