Asianet Suvarna News Asianet Suvarna News

ಕರ್ನಾಟಕ ಹೈಕೋರ್ಟ್ ಗೆ ನೂತನ ಮುಖ್ಯ ನ್ಯಾಯಾಧೀಶರ ನೇಮಕ

* ಕರ್ನಾಟಕ ಹೈಕೋರ್ಟ್ ಗೆ ನೂತನ  ಮುಖ್ಯ ನ್ಯಾಯಾಧೀಶರ ನೇಮಕ
* ನ್ಯಾ.ರಿತು ರಾಜು ಅವಸ್ಥಿ ನೇಮಕ
* ನೇಮಕಕ್ಕೆ ಅಂಕಿತ ಹಾಕಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Ritu Raj Awasthi appointed as Karnataka High Court Chief Justice rbj
Author
Bengaluru, First Published Oct 9, 2021, 7:38 PM IST
  • Facebook
  • Twitter
  • Whatsapp

ಬೆಂಗಳೂರು, (ಅ.09): ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಧೀಶರಾಗಿ (Karnataka High Court Chief Justices)ನ್ಯಾ.ರಿತು ರಾಜು ಅವಸ್ಥಿ ಅವರನ್ನು ನೇಮಕ ಮಾಡಲಾಗಿದೆ.

ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು(Chief Justices) ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇಂದು (ಅ.09) ಅಧಿಸೂಚನೆ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ.

ಏಕಕಾಲಕ್ಕೆ ದಾಖಲೆ 8 ಹೈಕೋರ್ಟ್ ಸಿಜೆಗಳ ನೇಮಕಕ್ಕೆ ಶಿಫಾರಸು 

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಅಲಹಾಬಾದ್ ಮೂಲದ ನ್ಯಾ.ರಿತು ರಾಜು ಅವಸ್ಥಿ ನೇಮಕವಾಗಿದೆ. ಇನ್ನು ಕರ್ನಾಟಕದ ನ್ಯಾ.ಅರವಿಂದ್ ಕುಮಾರ್ ಅವರನ್ನು  ಗುಜರಾತ್ ರಾಜ್ಯ ಹೈಕೋರ್ಟ್‌ನ  ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. 

ಕರ್ನಾಟಕ ಸೇರಿದಂತೆ 8 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ (CJI NV Ramana) ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು.

 ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದರೊಂದಿಗೆ ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸು ಮಾಡಲಾಗಿತ್ತು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರ ಪಟ್ಟಿ

* ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

* ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

* ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

* ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

* ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

* ಅಲಹಾಬಾದ್ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

* ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

* ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

Follow Us:
Download App:
  • android
  • ios