ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ನಟ ದರ್ಶನ್‌ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಪೊಲೀಸರು ಕರೆದುಕೊಂಡು ಹೊರಟಿದ್ದಾರೆ.

ಬೆಂಗಳೂರು (ಆ.29): ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ನಟ ದರ್ಶನ್‌ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಪೊಲೀಸರು ಕರೆದುಕೊಂಡು ಹೊರಟಿದ್ದಾರೆ. KA.41.G.0050 ಟಿಟಿಯಲ್ಲಿ ನಟ ದರ್ಶನ್ ಇದ್ದಾರೆ. ಎಸಿಪಿ ರಂಗಪ್ಪ ನೇತೃತ್ವದಲ್ಲಿ ಎಸ್ಕಾರ್ಟ್ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಗ್ಯಾಂಗ್ ಅನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸುವ ಸಂಬಂಧ ನ್ಯಾಯಾಲಯದ ಆದೇಶವನ್ನು ಅಧಿಕೃತವಾಗಿ ಬುಧವಾರ ಬೆಳಗ್ಗೆ ಸ್ವೀಕರಿಸಲಾಯಿತು. ಅಲ್ಲದೆ ವಿಶೇಷ ಸೌಲಭ್ಯ ಪಡೆದ ಪ್ರಕರಣದ ಕುರಿತು ಪರಪ್ಪನ ಅಗ್ರಹಾರ ಪೊಲೀಸರ ಮಹಜರ್ ಹಾಗೂ ವಿಚಾರಣೆ ಬಾಕಿ ಇತ್ತು. ಹೀಗಾಗಿ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ತಡವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ದರ್ಶನ್ ಗ್ಯಾಂಗ್ ಸ್ಥಳಾಂತರ ಬಗ್ಗೆ ಶಿವಮೊಗ್ಗ, ಬಳ್ಳಾರಿ, ಬೆಳಗಾವಿ, ಕಲುಬರಗಿ, ಧಾರವಾಡ, ವಿಜಯಪುರ ಹಾಗೂ ಮೈಸೂರು ಸೆಂಟ್ರಲ್ ಜೈಲುಗಳ ಮುಖ್ಯ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ. ಆರೋಪಿಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಆಯಾ ಜೈಲಿನ ಅಧಿಕಾರಿಗಳು ನೀಡಲಿದ್ದಾರೆ. ಜೈಲಿಗೆ ಕರೆದೊಯ್ಯುವಾಗ ಸೂಕ್ತ ಭದ್ರತೆ ಕಲ್ಪಿಸುವಂತೆ ಸಹ ಬೆಂಗಳೂರು ನಗರ ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.