Asianet Suvarna News Asianet Suvarna News

ವಿಶ್ವನಾಥ್‌ಗೆ 15 ಕೋಟಿ: ಚುನಾವಣಾ ಆಯೋಗ, ಇಡಿಗೆ ಆಪ್‌ ದೂರು

ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್‌.ವಿಶ್ವನಾಥ್‌ ಅವರಿಗೆ 15 ಕೋಟಿ ರು. ನೀಡಿರುವುದಾಗಿ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಆಮ್‌ ಆದ್ಮಿ ಪಕ್ಷವು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದೆ.

rs 15 crore to h vishwanath aap complains to election commission ed gvd
Author
First Published Dec 20, 2022, 2:00 AM IST

ಬೆಂಗಳೂರು (ಡಿ.20): ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್‌.ವಿಶ್ವನಾಥ್‌ ಅವರಿಗೆ 15 ಕೋಟಿ ರು. ನೀಡಿರುವುದಾಗಿ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಆಮ್‌ ಆದ್ಮಿ ಪಕ್ಷವು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದೆ.

ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್‌ ವಿ.ಸದಂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್‌.ವಿಶ್ವನಾಥ್‌ರವರಿಗೆ 15 ಕೋಟಿ ರು. ಹಣ ನೀಡಲಾಗಿತ್ತು. ಅದರಲ್ಲಿ ವಿಶ್ವನಾಥ್‌ 4ರಿಂದ 5 ಕೋಟಿ ರು. ವ್ಯಯಿಸಿದ್ದಾರೆ ಎಂಬುದಾಗಿ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಬಹಿರಂಗಪಡಿಸಿದ್ದಾರೆ. ವಿ.ಶ್ರೀನಿವಾಸ್‌ ಪ್ರಸಾದ್‌ ಸಹ ಚುನಾವಣೆಗೆ ಹಣ ಪಡೆದಿರುವಾಗಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಇದೊಂದು ಗಂಭೀರ ವಿಚಾರ ಮತ್ತು ಬಹುದೊಡ್ಡ ಚುನಾವಣಾ ಅಕ್ರಮವಾಗಿದೆ ಎಂದು ಆಕ್ಷೇಪಿಸಿದರು.

ಎಚ್ ವಿಶ್ವನಾಥ್ ಗೆ ತಲೆಕೆಟ್ಟಿರಬೇಕು, ಶಾಸಕ ಕೆ ಜಿ ಬೋಪಯ್ಯ ಆಕ್ರೋಶ

ಅಲ್ಲದೆ, ಚುನಾವಣಾ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿ ಕೇವಲ 28 ಲಕ್ಷ ರು. ಖರ್ಚು ಮಾಡಲು ಅವಕಾಶ ಇರುತ್ತದೆ. ಆದ್ದರಿಂದ ಈ 15 ಕೋಟಿ ರು. ಬಿಜೆಪಿ ಹೇಗೆ ಸಂಪಾದಿಸಿತು? ಅಭ್ಯರ್ಥಿ ಎಚ್‌.ವಿಶ್ವನಾಥ್‌ಗೆ ಏಕೆ ವರ್ಗಾಯಿಸಲಾಯಿತು? ವಿಶ್ವನಾಥ್‌ ನಾಲ್ಕೈದು ಕೋಟಿ ಹಣವನ್ನು ಹೇಗೆ ವ್ಯಯಿಸಿದರು? ಉಳಿದ 10 ಕೋಟಿ ರು. ಈಗ ಎಲ್ಲಿದೆ? ಈ ಪ್ರಶ್ನೆಗಳಿಗೆ ಸ್ಪಷ್ಟಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

Karnataka Politics : ಚುನಾವಣೆ ಹಣದ ಲೆಕ್ಕ ಕೇಳಲು ಶ್ರೀನಿವಾಸಪ್ರಸಾದ್‌ ಯಾರು?

ಎಎಪಿ ರಾಜಕೀಯ ಚಟುವಟಿಕೆ ವಿಭಾಗದ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು, ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೆ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ. ಎಚ್‌.ವಿಶ್ವನಾಥ್‌ ಹಾಗೂ ವಿ.ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

Follow Us:
Download App:
  • android
  • ios