ನಗರದ ಗಾಂಧಿ ಚೌಕ್ ಬಳಿ ಆರ್‌ಎಸ್‌ಎಸ್ ಮುಖಂಡ ಶಿರಿಶ್ ಬಳ್ಳಾರಿ ಮತ್ತು ಅವರ ಕುಟುಂಬದ ಮೇಲೆ ನಾಲ್ವರು ಮುಸ್ಲಿಂ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಧಾರವಾಡ (ಏ.23): ನಗರದ ಗಾಂಧಿ ಚೌಕ್ ಬಳಿ ಆರ್‌ಎಸ್‌ಎಸ್ ಮುಖಂಡ ಶಿರಿಶ್ ಬಳ್ಳಾರಿ ಮತ್ತು ಅವರ ಕುಟುಂಬದ ಮೇಲೆ ನಾಲ್ವರು ಮುಸ್ಲಿಂ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸಿಗರೇಟು ಸೇದದಂತೆ ಶಿರಿಶ್ ಬಳ್ಳಾರಿ ಬುದ್ಧಿವಾದ ಹೇಳಿದ್ದಕ್ಕೆ ಕುಪಿತಗೊಂಡ ಯುವಕರು, ಅವರ ಮನೆಯೊಳಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯಲ್ಲಿ ಶಿರಿಶ್ ಬಳ್ಳಾರಿ ಮತ್ತು ಕುಟುಂಬಸ್ಥರಿಗೆ ಗಂಭೀರ ಗಾಯಗಳಾಗಿದ್ದು, ಆರೋಪಿಗಳು ಘಟನೆಯ ನಂತರ ಪರಾರಿಯಾಗಿದ್ದಾರೆ. ಶಿರಿಶ್ ಬಳ್ಳಾರಿ ಅವರು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಪಹಲ್ಗಾಮ್ ದಾಳಿ: ರಾಜೂಗೌಡ ಆಕ್ರೋಶ, 'ಇವರೇ ಉಗ್ರರಿಗಿಂತ ಡೇಂಜರ್..' ಎಂದಿದ್ದು ಯಾರಿಗೆ?
ಸದ್ಯ ಶಹರ ಪೊಲೀಸ್ ಠಾಣೆಯ ಎದುರು ನೂರಾರು ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಘಟನೆಯಿಂದ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಿತಿಗತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.
