ಪ್ರಮುಖ ಸಾಮಾಜಿಕ ಕಾರ್ಯಕರ್ತ, ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಆರ್‌ಎಸ್‌ಎಸ್ ಹಿರಿಯ ಮುಖಂಡರಾದ ಕೃ. ನರಹರಿ (78) ಅವರು ನಿಧನರಾಗಿದ್ದಾರೆ. ಶಿಕ್ಷಣ, ಸಾಮಾಜಿಕ ಸೇವೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದ ಅವರ ನಿಧನಕ್ಕೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಅ.8): ಪ್ರಮುಖ ಸಾಮಾಜಿಕ ಕಾರ್ಯಕರ್ತ, ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕ್ಷೇತ್ರೀಯ ಕಾರ್ಯವಾಹರಾಗಿ ಸೇವೆ ಸಲ್ಲಿಸಿದ್ದ ಕೃ. ನರಹರಿ (78) ಅವರು ಇಂದು ಬೆಳಗ್ಗೆ 4:30ಕ್ಕೆ ನಿಧನರಾದರೆಂದು ಕುಟುಂಬ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ ಮತ್ತು ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಅವರು ಗಣನೀಯ ಕೊಡುಗೆ ನೀಡಿದ್ದರು. ಕೃ. ನರಹರಿ ಅವರು ತಮ್ಮ ಜೀವನದುದ್ದಕ್ಕೂ ಶಿಕ್ಷಣ, ಸಾಮಾಜಿಕ ಸೇವೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜಕ್ಕೆ ಮಹತ್ವದ ಕಾಣಿಕೆ ನೀಡಿದ್ದಾರೆ.
ಇದನ್ನೂ ಓದಿ: ಖ್ಯಾತ ಹಿಂದಿ, ಮರಾಠಿ ನಟಿ ಸಂಧ್ಯಾ ಶಾಂತಾರಾಂ ನಿಧನ
ಕೃ. ನರಹರಿ ಅವರ ನಿಧನದಿಂದ ರಾಜಕೀಯ, ಶೈಕ್ಷಿಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. ಅವರ ಕುಟುಂಬಕ್ಕೆ ಗಣ್ಯರು ಸಾಂತ್ವನ ಹೇಳುತ್ತಿದ್ದಾರೆ, ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
