Kalladka Prabhakar Bhat ಬೈಪಾಸ್ ಸರ್ಜರಿ ಯಶಸ್ವಿ, ಆಸ್ಪತ್ರೆಯಿಂದ ಕಲ್ಕಡ್ಕ ಪ್ರಭಾಕರ್ ಭಟ್ ಬಿಡುಗಡೆ!
- ಐದಾರು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಪ್ರಭಾಕರ್ ಭಟ್‌ಗೆ ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ
- ಪುತ್ರಿಯೊಂದಿಗೆ ಮನೆಗೆ ಮರಳಿ ಆರ್‌ಎಸ್ಎಸ್ ಮುಖಂಡ
ಮಂಗಳೂರು(ಏ.19): ಆರೆಸ್ಸೆಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೃದಯದ ಬೈಪಾಸ್ ಸರ್ಜರಿಯಿಂದ ಚೇತರಿಸಿಕೊಂಡು ಸೋಮವಾರ ಡಿಸ್ಚಾಜ್‌ರ್ ಆಗಿ ಮನೆಗೆ ಮರಳಿದ್ದಾರೆ.ಕಳೆದ ಐದಾರು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಲ್ಲಡ್ಕ ಭಟ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಸೋಮವಾರ ತನ್ನ ಪುತ್ರಿಯೊಂದಿಗೆ ಮನೆಗೆ ಮರಳಿದ್ದಾರೆ ಎಂದು ಅವರ ಸಂಬಂಧಿಕರು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿದ್ದ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಈ ನಡುವೆ ಭಟ್ ಅವರು ಕಲ್ಲಡ್ಕ ಶಾಲೆಯ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಬಳಿಕ ಬೈಪಾಸ್ ಸರ್ಜರಿಗೆ ಒಳಗಾಗಿದ್ದರು.
ಕಲ್ಕಡ್ಕ ಪ್ರಭಾಕರ್ ಭಟ್ ಗುಣಮುಖ: ಶ್ರೀರಾಮ ಶಾಲೆ ಕಾರ್ಯಕ್ರಮದಲ್ಲಿ ಭಾಗಿ
ಯಶಸ್ವಿ ಚಿಕಿತ್ಸೆ:
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮಾಡಿತ್ತು. ಸೋಮವಾರ ಬೆಳಗ್ಗೆ ಆರಂಭವಾದ ಶಸ್ತ್ರಚಿಕಿತ್ಸೆ ಸುಮಾರು 5-6 ಗಂಟೆಗಳ ಕಾಲ ನಡೆದಿದೆ. ಮಧ್ಯಾಹ್ನ ವೇಳೆಗೆ ಸರ್ಜರಿ ಸಂಪೂರ್ಣಗೊಂಡಿದೆ.
ಏ.5ರಂದು ಕಲ್ಲಡ್ಕದಲ್ಲಿ ಸಾರ್ವಜನಿಕ ಭೇಟಿ ವೇಳೆ ರಕ್ತದೊತ್ತಡ ಕಡಿಮೆಯಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಕೆಯಾಗಿದ್ದ ಪ್ರಭಾಕರ ಭಟ್, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೆ ಪೂರ್ವಭಾವಿಯಾಗಿ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.
ಕಲ್ಕಡ್ಕ ಭಟ್ ಜೊತೆ ಕೇಸರಿ ಶಾಲು ಧರಿಸಿಯೇ ವಿದ್ಯಾರ್ಥಿಗಳು ಭಾಗಿ: ಸಿಎಫ್ಐ ಪ್ರತಿಭಟನೆ
ನಾನು ಆರೋಗ್ಯವಾಗಿದ್ದೇನೆ, ಯಾರೂ ಭಯಪಡಬೇಕಾಗಿಲ್ಲ, ನನ್ನ ಆರೋಗ್ಯ ವಿಚಾರಿಸಿದ ಎಲ್ಲರಿಗೂ ಧನ್ಯವಾದ’ ಎಂದು ತನ್ನ ಆಪ್ತರ ಮೂಲಕ ಆಸ್ಪತ್ರೆಯಿಂದಲೇ ಅವರು ಸಂದೇಶ ರವಾನಿಸಿದ್ದರು.ಕಡಿಮೆ ರಕ್ತದೊತ್ತಡ ಕಾರಣ ಕಲ್ಲಡ್ಕ ಶಾಲೆಯಲ್ಲಿ ಸಾರ್ವಜನಿಕರ ಭೇಟಿಯಲ್ಲಿದ್ದ ಡಾ.ಪ್ರಭಾಕರ ಭಟ್ಟರನ್ನು ಮಂಗಳವಾರ ರಾತ್ರಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ರಾತ್ರಿಯೇ ಆ್ಯಂಜಿಯೋಗ್ರಾಂ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಚೇತರಿಸುತ್ತಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಆದರೆ ಬಳಿಕ ಎದೆನೋವು ಕಾಣಿಸಿಕೊಂಡ ಕಾರಣ ಮತ್ತೆ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.\
ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಭಟ್: ಸಿಎಫ್‌ಐ ಪ್ರತಿಭಟನೆ
ಮಂಗಳೂರು ವಿವಿ ಆವರಣದಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಕ್ಷೇಮಾಪಾಲನಾ ನಿರ್ದೇಶನಾಲಯದ ಈ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭದಲ್ಲಿ ಆರೆಸ್ಸೆಸ್ ಮುಖಂಡ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಭಾಗವಹಿಸಿದ್ದನ್ನು ಖಂಡಿಸಿ ಸಿಎಫ್‌ಐ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕೋಮುಭಾವನೆ ಕೆರಳಿಸುವ ಹೇಳಿಕೆ ನೀಡುತ್ತಾರೆ. ಅವರನ್ನು ಈ ರೀತಿಯ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕರೆದಿರುವುದು ಸರಿಯಲ್ಲ ಎಂದು ವಿವಿ ಮುಖ್ಯದ್ವಾರದಲ್ಲಿ ಪ್ರತಿಭಟನೆ ನಡೆಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪ್ರಭಾಕರ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಪೊಲೀಸರು ಪ್ರತಿಭಟನಾನಿರತರನ್ನು ವಿವಿ ಕ್ಯಾಂಪಸ್ನೊಳಗೆ ಪ್ರವೇಶಿಸದಂತೆ ತಡೆದಿದ್ದರು.
ಹಿಂದೂ ಸಮಾಜ ಒಡೆಯುವುದು ಸಹಿಸಲ್ಲ
ಹಿಂದೂ ಸಮಾಜ ಕೇವಲ ಮಂತ್ರದಿಂದ ಸದೃಢಗೊಳ್ಳಲು ಸಾಧ್ಯವಿಲ್ಲ. ಹಿಂದೂಗಳು ಶಾಸ್ತ್ರದ ಜೊತೆ ಶಸ್ತ್ರ ಪ್ರಯೋಗಕ್ಕೂ ಒತ್ತು ನೀಡಬೇಕು ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಶಿವಾಜಿ ಜಯಂತಿ ಅಂಗವಾಗಿ ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿ, ಯಾರೇ ಆಗಲಿ ತಮ್ಮ ರಾಜಕೀಯ ಲಾಭಕ್ಕಾಗಿ ಹಿಂದೂ ಸಮಾಜ ಒಡೆಯುವುದು ಎಂದಿಗೂ ಸಹಿಸಲು ಸಾಧ್ಯವಿಲ್ಲ. ನಿಮ್ಮ ಅಧಿಕಾರ ಅಲ್ಪಾವಧಿ. ನೀವು ಅಧಿಕಾರದಿಂದ ಹೋದ ನಂತರ ಮತ್ತೆ ಇಲ್ಲಿಗೆ ಬರುತ್ತೀರಿ ಎನ್ನುವುದು ಮರೆಯಬೇಡಿ ಎಂದರು.