ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತೀವ್ರನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.  

ಬೆಂಗಳೂರು(ಅ.04):  ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ನಿನ್ನೆ(ಮಂಗಳವಾರ) ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಸಾಲುಮರದ ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Add Asianetnews Kannada as a Preferred SourcegooglePreferred

ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತೀವ್ರನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. 

Chaitra Kundapur Case: ನನಗೂ ಗಗನ್‌ ಕಡೂರಿಗೂ ಸಂಬಂಧ ಇಲ್ಲ: ಸಾಲುಮರದ ತಿಮ್ಮಕ್ಕ

ತಿಮ್ಮಕ್ಕ ಅವರು ಬೆಂಗಳೂರಿನ ಬಾಡಿಗೆ ಮನೆಯಿಂದ ಬೇಲೂರಿಗೆ ಹೋಗಿ ವಾಸವಿದ್ದರು. ಬೆಂಗಳೂರು ಮನೆ ವಾಸಕ್ಕೆ ಸ್ವಲ್ಪ ಸಮಸ್ಯೆ ಎಂದು ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡಿನ ಪ್ರದೇಶ ಆಗಿರುವುದರಿಂದ ಕೋಲ್ಡ್ ಜಾಸ್ತಿಯಾಗಿದೆ. ಮೂರು ದಿನದಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ವಿ ಆದರೂ ಕಡಿಮೆಯಾಗಲಿಲ್ಲ. ನಿನ್ನೆ ಉಸಿರಾಟದ ಸಮಸ್ಯೆ ಜಾಸ್ತಿ ಆಯ್ತು. ಆದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಧ್ಯಾಹ್ನ 2:30ಕ್ಕೆ ಅಡ್ಮಿಟ್ ಮಾಡಿದ್ದೇವೆ ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ. 

ಡಾ.ರವೀಂದ್ರ ಮೆಹ್ತಾ ಅವರ ಟೀಮ್ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸಾಲುಮರದ ತಿಮ್ಮಕ್ಕ ಅವರು ಚೇತರಿಸಿಕೊಂಡಿದ್ದಾರೆ.