ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಊಹಾಪೋಹಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್‌!

ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಸಾಲುಮರದ ತಿಮಕ್ಕ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹರಡಬೇಡಿ ಎಂದು ದತ್ತುಪುತ್ರ ಉಮೇಶ್‌ ಮನವಿ ಮಾಡಿದ್ದಾರೆ.

Saalumarada Thimmakka is healthy Do not spread speculations Adopted son Umesh request sat

ಬೆಂಗಳೂರು (ಅ.05): ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು, ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ ಮಾಡಿರುವ ಅವರ ದತ್ತುಪುತ್ರ ಉಮೇಶ್‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸಾಲು ಮರದ ತಿಮ್ಮಕ್ಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.

Haveri: ಸರ್ಕಾರಿ ಬಸ್‍ ಏರಿದ ಆಂಜನೇಯ: 30 ಕಿಲೋ ಮೀಟರ್ ಪ್ರಯಾಣಿಸಿದ ಕೋತಿ!

ಜೊತೆಗೆ, ಒಂದಿಷ್ಟು ಭಾವನಾತ್ಮಕ ಸಂದೇಶ ಬರೆದುಕೊಂಡು ಮತ್ತೆ ಹುಟ್ಟಿಬನ್ನಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ, ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಶ್ರದ್ಧಾಂಜಲಿ ಪೋಸ್ಟ್‌ ಹಾಕಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದ್ದಂತೆ ಈ ಬಗ್ಗೆ ವಿಡಿಯೋ ಮೂಲಕ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ನೀಡಿದ ತಿಮ್ಮಕ್ಕಳ ದತ್ತುಪುತ್ರ ಉಮೇಶ್‌ ಯಾರೊಬ್ಬರೂ ಸುಳ್ಳು ಸುದ್ದಿ ಹರಡದಂತೆ ವಿನಂತಿ ಮಾಡಿಕೊಂಡಿದ್ದಾರೆ.

ಹವಮಾನ ವೈಪರೀತ್ಯದಿಂದ ಉಸಿರಾಟ ತೊಂದರೆ: ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನ ಮನೆಯಲ್ಲಿ ವಾಸವಾಗಿರುವ ಸಾಲುಮರದ ತಿಮ್ಮಕ್ಕ ದಿಢೀರನೆ ವಾತಾವರಣ ಬದಲಾವಣೆಯಿಂದ ಉಸಿರಾಟ ಸಮಸ್ಯೆ ಉಂಟಾಗಿತ್ತು. ಮಂಗಳವಾರ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಇನ್ನು ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈಗ ಚೇತರಿಕೆ ಕಾಣಿಸಿಕೊಂಡಿದ್ದು ಊಟವನ್ನೂ ಮಾಡುತ್ತಿದ್ದಾರೆ. ಬೆಳಗ್ಗೆ ತಿಂಡಿ ತಿನ್ನಿಸುತ್ತಿರುವ ವಿಡಿಯೋ ಹಂಚಿಕೊಮಡಿದ್ದು, ಅದರಲ್ಲಿ ತಿಮ್ಮಕ್ಕ ಕೂಡ ತಮ್ಮ ಗ್ರಾಮೀಣ ಸೊಗಡಿನ ಶೈಲಿಯಲ್ಲಿಯೇ ಮಗನೊಂದಿಗೆ ಮಾತನಾಡಿದ್ದಾರೆ.

Latest Videos
Follow Us:
Download App:
  • android
  • ios