ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಂಪತಿಗೆ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ದೆಹಲಿಗೆ ಆಹ್ವಾನ. ಸಂಜೀವಿನಿ ಯೋಜನೆಯಡಿ ಚಿತ್ತಾರ ಕಲೆ ಪ್ರದರ್ಶಿಸಿದ್ದಕ್ಕೆ ಈ ಗೌರವ. ರಾಷ್ಟ್ರಪತಿಗಳ ಭೇಟಿಗೆ ಅವಕಾಶ.

ಉತ್ತರ ಕನ್ನಡ: (ಆ.9): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.

Add Asianetnews Kannada as a Preferred SourcegooglePreferred

ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.

ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.

ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದುಶ್ರೀವಿದ್ಯಾ ತಿಳಿಸಿದ್ದಾರೆ.

ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.