ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ
ಅಂಧರಾಗಿದ್ದ ಮಂಜಮ್ಮ ಝೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು.

ತುಮಕೂರು(ಜ.28): ಸರಿಗಮಪ ಖ್ಯಾತಿಯ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಸರಿಗಮಪ ಜ್ಯೂರಿ, ಲಯವಾದ್ಯಗಳ ಮಾಂತ್ರಿಕ, ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್ ಎಸ್ ಬಾಲಿ ವಿಧಿವಶ
ಅಂಧರಾಗಿದ್ದ ಮಂಜಮ್ಮ ಝೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು.