ನವದೆಹಲಿ [ನ.09]:  ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು 1885ರಲ್ಲಿ ಮೊದಲ ಬಾರಿ ನ್ಯಾಯಾಲಯದ ಕಟಕಟೆ ಏರಿದ್ದ, ಬಳಿಕದ 134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಭೂವಿವಾದ ಕುರಿತ ಐತಿಹಾಸಿಕ ತೀರ್ಪು ಇಂದು ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ.

ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ. ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.
 
ಈ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗುವುದು ಬೇಡ ಎಂಬ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಸಚಿವ ಎಸ್. ಸುರೇಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ. 

ಧಾರವಾಡ, ತುಮಕೂರು, ಶಿವಮೊಗ್ಗ ವಿವಿಗಳ ಪರೀಕ್ಷೆಗಳನ್ನೂ ಮುಂದೂಡಲಾಗಿದೆ.