ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಬೆಂಗಳೂರು ಡಿ.19: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

Add Asianetnews Kannada as a Preferred SourcegooglePreferred

ಕೈಗಾರಿಕೆಗಳ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಶಿಫ್ಟ್‌ಗಳಲ್ಲಿ ಕಾರ್ಮಿಕರು ಕೆಲಸ ಮಾಡುವುದರಿಂದ ದಟ್ಟಣೆಗೆ ಕಾರಣವಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಹೀಗಾಗಿ ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಂಥ ಹತ್ಯೆ ಇಡೀ ವ್ಯವಸ್ಥೆಗೇ ಬೆದರಿಕೆ; ಕಲಬುರಗಿ ವಕೀಲ ಪಾಟೀಲ ಹತ್ಯೆಗೆ ಹೈಕೋರ್ಟ್‌ ಕಳವಳ

ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣದೀಕ್ಷಿತ್‌ರಿದ್ದ ಪೀಠದ ಮುಂದೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದ್ದು ಜನವರಿ ಮೊದಲ ವಾರಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ಸಮರ್ಪಣ ಸಾಂಸ್ಕೃತಿಕ ಸೇವಾ ಸಂಸ್ಥೆ ಪಿಐಎಲ್ ಸಲ್ಲಿಸಿತ್ತು. ಇನ್ನು ಸಮಯ ಬದಲಾವಣೆಗೆ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕರಿಂದಲೂ ವಿರೋಧ ವ್ಯಕ್ತವಾಗಿತ್ತು. ಪರ್ಯಾಯ ಮಾರ್ಗದ ಕುರಿತು ಕೆಲ ಖಾಸಗಿ ಸಂಘಟನೆ ಸಲಹೆ ನೀಡಿತ್ತು.

ಹೈಕೋರ್ಟಲ್ಲಿ ನಾಡಿದ್ದಿಂದ ಮತ್ತೆ ಆನ್‌ಲೈನ್‌ ಕಲಾಪ, ಇಲ್ಲಿದೆ ಮಾರ್ಗಸೂಚಿ