ನಾಳೆ(ಜೂ.12) ಭಾರಿ ಮಳೆಯಿಂದ ಕರ್ನಾಟಕದ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಒಂದು ದಿನ (ಜೂ.12) ರಜೆ ನೀಡಲಾಗಿದೆ.
ಮಡಿಕೇರಿ(ಜೂ.11) ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆ, ರೆಡ್ ಅಲರ್ಟ್ ಕಾರಣದಿಂದ ಕರ್ನಾಟಕದ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ಒಂದು ದಿನ ರಜೆ ಘೋಷಿಸಲಾಗಿದೆ. ಕೊಡುಗು ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ (ಜೂ.12) ಒಂದು ದಿನ ರಜೆ ಘೋಷಿಸಲಾಗಿದೆ. ಉಡುಪಿ ಹಾಗೂ ಕೊಡಗು ಜಿಲ್ಲಾಧಿಕಾರಿ ಮುನ್ನಚ್ಚೆರಿಕಾ ಕ್ರಮವಾಗಿ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಒಂದು ದಿನ ರಜೆ ನೀಡಲಾಗಿದೆ.
ಕೊಡುಗಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ
ಭಾರಿ ಮಳೆಯಿಂದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಪೈಕಿ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡುಗು ಜಿಲ್ಲೆಯಲ್ಲಿ 204 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದರ ಹಿನ್ನಲೆಯಲ್ಲಿ ಸುರಕ್ಷಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಆದೇಶ ನೀಡಿದ್ದಾರೆ.
ಗುಡ್ಡದ ತಪ್ಪಲಿನ ಜನರು, ನದಿ ಪಾತ್ರದ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿತ ಸಂಭವ, ಪ್ರವಾಹ ಪರಿಸ್ಥಿತಿ ಇರುವುದರಿಂದ ಎಚ್ಚರಿಕೆ ವಹಿಸಬೇಕಾಗಿ ಕೊಡಗು ಜಿಲ್ಲಾಧಿಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ರಜೆ
ಉಡುಪಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ಜೂನ್ 12ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಹೇಳಿದೆ. ಹೀಗಾಗಿ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮಹತ್ವದ ಸಭೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ.
ನಾಡದೋಣಿ ಕಡಿಲಿಗೆ ಇಳಿಯದಂತೆ ಸೂಚನೆ
ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಜೂನ್ 12 ರಂದು ರೆಡ್ ಅಲರ್ಟ್ ಹಾಗೂ ಮುಂದಿನ 3 ದಿನ ಆರೇಂಜ್ ಅಲರ್ಟ್ ನೀಡಿದೆ. ಹೀಗಾಗಿ ನಾಡದೋಣಿಗಳು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದೇ ವೇಳೆ ಕಡಲ ತೀರ ಪ್ರದೇಶದ ಜನರಿಗೂ ಎಚ್ಚರಿಯಿಂದ ಇರುವಂತೆ ಸೂಚಿಸಲಾಗಿದೆ. ಗುಡುಗು ಸಹಿತ ಮಳೆಯಾುವ ಕಾರಣ ಸಾರ್ವಜನಿಕರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
