ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ

* ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕಗ್ಗೊಲೆ
* ಮೊದಲ ಪ್ರತಿಕ್ರಿಯೆ ಕೊಟ್ಟ  SDPI ಸಂಘಟನೆ
* ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಎಸ್‌ಡಿಪಿಐ ಪ್ರತಿಕ್ರಿಯೆ

SDPI Reacts On Hindu Activist Harsha Murder In Shivamogga rbj

ಬೆಂಗಳೂರು, (ಫೆ.21): ಶಿವಮೊಗ್ಗದಲ್ಲಿ (Shivamogga) ಭಜರಂಗದಳದ ಕಾರ್ಯಕರ್ತ ಹರ್ಷ ಭೀಕರ ಹತ್ಯೆಯಿಂದ (Murder) ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.

ಈ ಕೊಲೆಯಿಂದ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕೈವಾಡವಿರುವ ಶಂಕೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಎಸ್‌ಡಿಪಿಐ ಪತ್ರಿಕಾ ಪ್ರಕರಣ ಹೊರಡಿಸಿದ್ದು, ಶಾಂತಿ ಕಾಪಾಡಲು ಶಿವಮೊಗ್ಗ ಜನತೆಯಲ್ಲಿ SDPI ಮನವಿ ಮಾಡಿಕೊಂಡಿದೆ. ಅಲ್ಲದೇ ಸಚಿವ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿದೆ. ಇನ್ನು ಎಸ್‌ಡಿಪಿಐನ ಪ್ರಕಟಣೆಯಲ್ಲಿ ಏನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಕೇಸ್: ಈಶ್ವರಪ್ಪ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ

ಎಸ್‌ಡಿಪಿಐ ಪ್ರಕಟಣೆ ಇಂತಿದೆ
ಶಿವಮೊಗ್ಗ ನಗರದಲ್ಲಿ ನಿನ್ನೆ(ಭಾನುವಾರ) ನಡೆದ ಕೊಲೆಗಳು ಹಾಗೂ ಗಲಭೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಶಿವಮೊಗ್ಗ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. 

ಒಂದೇ ದಿನ ಮೂರು ಕೊಲೆ ನಡೆದಿರುವುದು ಆತಂಕದ ವಿಷಯವಾಗಿದ್ದು, ಈ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಮತ್ತು ಮಂತ್ರಿಗಳಾದ ಈಶ್ವರಪ್ಪನವರು ಪೋಲೀಸರ ತನಿಖೆಯ ಹಾದಿ ತಪ್ಪಿಸುವ ಮತ್ತು ತನಿಖೆ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಒಂದು ಸಮುದಾಯದ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ತಮ್ಮ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ನಡೆಸುತ್ತಿರುವ ಧರಣಿಯನ್ನು ವಿಷಯಾಂತರ ಮಾಡುವ ಉದ್ದೇಶ ಅಡಗಿದೆ ಎಂದಿದೆ.

Shivamogga ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ, ಈಶ್ವರಪ್ಪ ಗಂಭೀರ ಆರೋಪ

ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಿರುವುದು ವಿಷಾದನೀಯ.  ಶಿವಮೊಗ್ಗ ನಗರದ ಜನತೆ ಶಾಂತಿ ಕಾಪಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮನವಿಯನ್ನು ಮಾಡುತ್ತದೆ ಎಂದು SDPI ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈಶ್ವರಪ್ಪ ಹೇಳಿದ್ದೇನು
ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ(ಭಾನುವಾರ) ಮುಸಲ್ಮಾನ(Muslim) ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕೆಲವೇ ಹೊತ್ತಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತೇನೆ. ಇದರ ಬಗ್ಗೆ ಸಿಎಂ ಮತ್ತು ಹೋಂ ಮಿನಿಸ್ಟರ್ ಜತೆ ಮಾತಾಡಿದೀನಿ. ಶಿವಮೊಗ್ಗದಲ್ಲಿ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಡಿಕೆ ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ ಕಿಡಿಕಾರಿದ್ದಾರೆ.

ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ. ಕೇಸರಿ ಶಾಲೆ ಹಚ್ಚಿದ್ದಾರೆ, ರಾಷ್ಟ್ರ ಧ್ವಜ ತೆಗೆದು ಭಗಧ್ವಜ ಹಾರಿಸಿದ್ದಾರೆ ಎಂಬಂತಹ ಡಿಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

ಎಸ್‌ಡಿಪಿಐ ಬ್ಯಾನ್‌ಗೆ ಸಿಂಹ ಒತ್ತಾಯ
ಇಂದು (ಸೋಮವಾರ) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಸಂಸದ ಪ್ರತಾಪ್ ಸಿಂಹ, ಬೀದಿಯಲ್ಲಿ ಹರ್ಷ ಅವರ ಕಗ್ಗೊಲೆಯಾಗಿದ್ದು ಅತೀವ ನೋವಾಗಿದೆ ಮತ್ತು ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಅಸಮಾಧಾನ ಹೊರಹಾಕಿದರು.

ಹಿಂದೆ ಮಂಗಳೂರಿನಲ್ಲಿ ಗೋಲಿಬಾರ್ ಮತ್ತು ಕೆ ಜಿ ಹಳ್ಳಿಯಲ್ಲಿ ಗಲಭೆ ನಡೆದಾಗ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡಿದ್ದರೆ ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ. ಈಗಲಾದರೂ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಆಗ್ರಹಿಸಿದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದರೆ ಮತ್ತು ನಾಲ್ಕು ಜನರನ್ನು ಬಂಧಿಸಿ ಜೈಲಿಗೆ ಹಾಕಿದರೆ ಸಾಲದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಸ್ಥೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

‘ಹೈದರಾಬಾದ್‌ನಲ್ಲಿ ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು, ಇಲ್ಲೂ ಅದೇ ರೀತಿ ಕ್ರಮಗಳನ್ನು ಕೈಗೊಂಡರೆ ಪಾಠ ಕಲಿಯುತ್ತಾರೆ. ಕೆ ಜಿ ಹಳ್ಳಿ ಗಲಭೆ ನಡೆದಾಗ ವೇಳೆ ಬೊಮ್ಮಾಯಿ ಗೃಹ ಸಚಿವರಾಗಿದ್ದರು, ಆ ಸಂದರ್ಭದಲ್ಲೇ ಅವರು ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಸ್ಥೆಗಳ ಮೇಲೆ ನಿಷೇಧ ಹೇರಿದ್ದರೆ, ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ ಎಂದು ಹೇಳಿದರು.

 

Latest Videos
Follow Us:
Download App:
  • android
  • ios