ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಮತ್ತೆ ಕರುನಾಡನ್ನೇ ಬೆಚ್ಚಿಬೀಳಿಸಿದ ಮಹಾಮಾರಿ

ರಾಜ್ಯದಲ್ಲಿ ಕೊರೋನಾ ಆರ್ಭಟ ಭೀತಿ ಮುಂದುವರೆದಿದ್ದು, ಒಂದೇ ದಿನದಲ್ಲಿ ಎರಡು ಸಾವಿರ ಪ್ಲಸ್ ಪಾಸಿಟಿವ್ ಕೇಸ್‌ಗಳು ವರದಿಯಾಗಿವೆ.

second wave of corona 2010 New Cases and 5 deaths In Karnataka on March 23 rbj

ಬೆಂಗಳೂರು, (ಮಾ.23): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಶುರುವಾಗಿರುವುದು ಪಕ್ಕಾ ಆಗಿದೆ. ಯಾಕಂದ್ರೆ ಇಂದು (ಮಂಗಳವಾರ)  ಒಂದೇ ದಿನ ರಾಜ್ಯಾದ್ಯಂತ ಮತ್ತೆ ದಾಖಲೆಯ 2,010 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು,  5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 9,73,657ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,449ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲೇ ಮಂಗಳವಾರ 1,280 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,19,838ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ 2ನೇ ಅಲೆ: ಕ್ಲಾಸ್, ಪರೀಕ್ಷೆ ನಡೆಸುವ ಬಗ್ಗೆ ಡಿಸಿಎಂ ಮಹತ್ವದ ಹೇಳಿಕೆ

 ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 677 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,45,594ಕ್ಕೆ ಏರಿಕೆಯಾಗಿದೆ. ಇನ್ನು 15,595ಸಕ್ರಿಯ ಕೇಸ್‌ಗಳಿದ್ದು, ಈ ಪೈಕಿ 136 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಇಂದಿನ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆ ಬರೆದಿದೆ. ಕೋವಿಡ್ ಲಸಿಕೆ ಬಂದ ಮೇಲೆ ಮೊದಲೆಲ್ಲ 200ರಿಂದ 300 ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದುವು. ಆದ್ರೆ, ಈ ಎರಡನೇ ಅಲೆಯಲ್ಲಿ ಒಂದೇ ದಿನದಲ್ಲಿ  ಬರೊಬ್ಬರಿ 2,010 ಸೋಂಕಿತರು ಕಂಡಬಂದಿದ್ದು,ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.

ಹಾಗಾಗಿ ನಿಮ್ಮ ಏಷ್ಯಾನೆಟ್ ಸುವರ್ಣನ್ಯೂಸ್ ಮನವಿ ಮಾಡಿಕೊಳ್ಳುವುದು ಇಷ್ಟೇ, ಕಡ್ಡಾಯವಾಗಿ ಮಾಸ್ಕ್ ಬಳಸಿ, ಸಾಮಾಜಿಕ ಅಂತ ಕಾಪಾಡಿಕೊಳ್ಳಿ. ಇನ್ನೂ ಅನಗತ್ಯವಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ಪ್ರಯಾಣ ಮಾಡುವುದನ್ನು ತಪ್ಪಿಸಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಯೋಚಿಸಿ.

Latest Videos
Follow Us:
Download App:
  • android
  • ios