ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಶಕ್ತಿ ಯೋಜನೆ ಜಾರಿಯಾದ ಎರಡನೇ ವಿಕೇಂಡ್‌ನಲ್ಲೂ ಮಹಿಳೆಯರ ಪ್ರಯಾಣ ಜೋರಾಗಿದೆ. 

ಬೆಂಗಳೂರು (ಜೂ.25): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಶಕ್ತಿ ಯೋಜನೆ ಜಾರಿಯಾದ ಎರಡನೇ ವಿಕೇಂಡ್‌ನಲ್ಲೂ ಮಹಿಳೆಯರ ಪ್ರಯಾಣ ಜೋರಾಗಿದೆ. ನಿನ್ನೆ (ಶನಿವಾರ) ಕೂಡ 58 ಲಕ್ಷದ 14 ಸಾವಿರದ 524 ಮಹಿಳೆಯರ ಪ್ರಯಾಣ ಮಾಡಿದ್ದು, ಕಳೆದ ವಾರಕ್ಕೆ ಹೋಲಿಕೆ ಮಾಡಿದ್ರೆ ಈ ವಾರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಶನಿವಾರ 54 ಲಕ್ಷದ 30 ಸಾವಿರದ 150 ಮಹಿಳೆಯರು ಪ್ರಯಾಣ ಮಾಡಿದ್ದರು. ನಿನ್ನೆ 58 ಲಕ್ಷ ಮಹಿಳಾ ಪ್ರಯಾಣಿಕರ ಸಂಖ್ಯೆ ದಾಟಿತ್ತು.

ನಿನ್ನೆಯ ಮಹಿಳಾ ಪ್ರಯಾಣಿಕರ ಓಡಾಟದ ಅಂಕಿ ಅಂಶ:
ಕೆಎಸ್‌ಆರ್‌ಟಿಸಿ (KSRTC)

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ: 17,29,314
ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ: ₹4,92,92,066

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ ಸಂವಿಧಾನಕ್ಕೆ ಗಂಡಾಂತರ: ಸಚಿವ ಮಹದೇವಪ್ಪ

ಬಿಎಂಟಿಸಿ (BMTC)
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ: 18,95,144
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ: ₹2,41,94,354

NWRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ: 14,01,910
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ: ₹3,50,40,233

KKRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ: 7,88,156
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ: 2,55,94,985

ಜೂನ್ 11 ರಿಂದ ಜೂನ್ 24 ರವರೆಗೆ ನಾಲ್ಕು ನಿಗಮದ ಬಸ್‌ಗಳಲ್ಲಿ ಓಡಾಟ ನಡೆಸಿದವರ ಸಂಖ್ಯೆ: ನಾಲ್ಕು ನಿಗಮದ ಬಸ್‌ಗಳಲ್ಲಿ 7,15,58,775 ಮಹಿಳೆಯರು ಪ್ರಯಾಣ ಮಾಡಿದ್ದು, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 166,09,27,526 ಆಗಿದೆ.

ಹಳೆ ಬಸ್‌ ಗುಜರಿಗೆ ಹಾಕಿ 4000 ಹೊಸ ಬಸ್‌ ಖರೀದಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಂದ ಉತ್ತಮ ಸೇವೆ ನೀಡುವ ಸಲುವಾಗಿ 4 ಸಾವಿರ ಹೆಚ್ಚುವರಿ ಬಸ್‌ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ. ಅದರಲ್ಲಿ 3 ಸಾವಿರಕ್ಕೂ ಹೆಚ್ಚಿನವು ಸಾಮಾನ್ಯ ಬಸ್‌ಗಳಾಗಿದ್ದು, ಉಳಿದವು ಮಲ್ಟಿಆಕ್ಸೆಲ್‌ ಬಸ್‌ಗಳಾಗಿವೆ. ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಸಂಸ್ಥೆಯಿಂದ ಉತ್ತಮ ಸೇವೆ ನೀಡುವ ಸಲುವಾಗಿ ಹೊಸದಾಗಿ 4 ಸಾವಿರ ಬಸ್‌ಗಳ ಸೇರ್ಪಡೆ ಮಾಡಲಾಗುತ್ತಿದೆ. 

ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆ ಹೊರಹಾಕಿದ ಸಂಸದ ರಮೇಶ್ ಜಿಗಜಿಣಗಿ

ಈಗಿರುವ ಬಸ್‌ಗಳನ್ನು ಪರೀಕ್ಷೆಗೊಳಪಡಿಸಿ ಅನುಪಯುಕ್ತ ಬಸ್‌ಗಳನ್ನು ಸ್ಕ್ರಾಪ್‌ ಮಾಡಲು ನಿರ್ಧರಿಸಲಾಗಿದೆ. ಅದರ ಜತೆಗೆ ಬಸ್‌ಗಳಲ್ಲಿ ನಿಗದಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳದಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಚಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಲ್ಲಿ ಸಂಸ್ಥೆಯ ನಷ್ಟದ ಪ್ರಮಾಣ 300ರಿಂದ 400 ಕೋಟಿ ರು. ಇತ್ತು. ಆದರೀಗ, ಅದು 4 ಸಾವಿರ ಕೋಟಿ ರು.ಗೆ ತಲುಪಿದೆ. ನಾಲ್ಕೂ ನಿಗಮಗಳ ನಷ್ಟವನ್ನು ತಗ್ಗಿಸಲು ಕ್ರಮ ಸೂಕ್ತ ಕ್ರಮ ಕೈಗೊಳ್ಳಲಾಗತ್ತದೆ ಎಂದು ಹೇಳಿದರು.