ಗ್ಯಾರಂಟಿ ಯೋಜನೆಯಿಂದ ಬಡ ಕುಟುಂಬಗಳು ಸ್ವಾವಲಂಬಿ ಜೀವನ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷಿ ್ಮಯೋಜನೆ ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳು ರಾಜ್ಯದ ಪ್ರತಿ ಕುಟುಂಬಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

Self reliant life of poor families through guarantee scheme says Lakshmi Hebbalkar rav

ಕೆ.ಆರ್‌.ಪೇಟೆ (ಆ.27) :  ಗೃಹಲಕ್ಷಿ ್ಮಯೋಜನೆ ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳು ರಾಜ್ಯದ ಪ್ರತಿ ಕುಟುಂಬಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆಯ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿ 1 ಕೋಟಿ, 10 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಗೆ 72 ಕೋಟಿ ಯೋಜನೆಯಲ್ಲಿ ನೀಡಲಾಗುತ್ತಿದೆ ಎಂದರು.

ಇಡೀ ದೇಶದಲ್ಲೇ ಮಹಿಳೆಯನ್ಮು ಸ್ವಾವಲಂಭಿಯಾಗಿ ರೂಪಿಸಲು ಹಾಕಿಕೊಂಡಿರುವ ಗೃಹಲಕ್ಷ್ಮಿ ಯೋಜನೆ(Gruhalakshmi scheme) ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಯೋಜನೆ ಮೂಲಕ ಒಂದು ವಷÜರ್‍ಕ್ಕೆ 36 ಸಾವಿರ ಕೋಟಿ ಮಹಿಳೆಯರಿಗೆ ನೀಡುತ್ತಿದ್ದೇವೆ ಎಂದರು.

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

 

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಗಸ್ಟ್‌ 30 ರಂದು ಚಾಲನೆ ದೊರೆಯಲಿದೆ. ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಭಾಗವಸಲಿದ್ದಾರೆ. ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿದ್ದ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ ಎಂದರು.

ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುವವರಿಗೆ ನಮ್ಮ ಸರ್ಕಾರದ ಯೋಜನೆಗಳು ಸಹಕಾರಿಯಾಗಲಿವೆ. ಸಂಕಷÜ್ಟದಲ್ಲಿರುವ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಬೇಕು ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಕೊರೋನಾ ನಂತರ ಜೀವನ ಬಹಳ ಕಷÜ್ಟದಾಯಕವಾಗಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳಿಂದ ಕುಟುಂಬಗಳ ಆರ್ಥಿಕ ಮಟ್ಟಸುಧಾರಿಸಿಕೊಳ್ಳಲಿವೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳ ನಡುವೆ ನೋಂದಣಿ ಮಾಡಿಸಲು ಶ್ರಮಿಸಿದ್ದೀರಿ. ನಿಮಗೆ ಅಭಿನಂದನೆಗಳು. ಈ ಶ್ರೇಯಸ್ಸು ನನ್ನ ಇಲಾಖೆಯ ಎಲ್ಲ ಸಿಬ್ಬಂದಿಗೂ ಸಲ್ಲಬೇಕು. ಇದೇ ತಿಂಗಳ 30ರಂದು ಮೈಸೂರಿಗೆ ತೆರಳಲು ಬಸ್‌ ಸೇರಿದಂತೆ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಆದ್ದರಿಂದ ಹೆಚ್ಚಿನ ಮಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಸರ್ಕಾರಿ ಕಾರ್ಯಕ್ರಮದಲ್ಲಿ ಫೋಟೋಕಾಲ್‌ ಇರುವುದರಿಂದ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಅನುಸರಿಸಿಕೊಂಡು ಹೋಗಬೇಕು ಎಂದು ಸಚಿವೆ ಹೆಬ್ಬಾಳ್ಕರ್‌ ಕಿವಿಮಾತು ಹೇಳಿದರು.

ಶಾಸಕರನ್ನು ಹೊಗಳಿದ ಸಚಿವರು:

ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ವಿಷಯ ಬಂದಾಗ ಕ್ಷೇತ್ರದ ಶಾಸಕ ಎಚ್‌.ಟಿ.ಮಂಜು ಸರ್ಕಾರದ ಜೊತೆ ಕೈ ಜೋಡಿಸಿ ಕೆಲಸ ಮಾಡುತ್ತಿರುವುದು ಬಹಳ ಸಂತಸ ತಂದಿದೆ. ದಯವಿಟ್ಟು ನೀವೂ ಆ.30ರಂದು ಮೈಸೂರಿಗೆ ಬನ್ನಿ ಎಂದು ಆಹ್ವಾನಿಸಿದರು.

ಶಾಸಕ ಎಚ್‌.ಟಿ.ಮಂಜು ಮಾತನಾಡಿ, ತಾಲೂಕಿನಲ್ಲಿ 69,490 ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯಲ್ಲಿ ಇಡೀ ಜಿಲ್ಲೆಗೆ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ನಮ್ಮ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ತಾಲೂಕಿಗೆ 24 ಅಂಗನವಾಡಿ ಕಟ್ಟಡಗಳ ಅವಶ್ಯಕತೆ ಇದೆ. ಅಗತ್ಯ ಕಟ್ಟಡಗಳ ನಿರ್ಮಾಣ ಮಾಡಲು ಅನುದಾನ ನೀಡಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರೂ ಕಷÜ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ಹೆಚ್ಚಿನ ಸವಲತ್ತು ಒದಗಿಸಿಕೊಡಬೇಕೆಂದು ಸಚಿವರಿಗೆ ಮನವಿ ಮಾಡಿದರು.

ಸಿಎಂ ತವರು ಮೈಸೂರಲ್ಲೇ ಗೃಹಲಕ್ಷ್ಮಿಗೆ ಚಾಲನೆ: ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ನಂದೀಶ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ತಹಸೀಲ್ದಾರ್‌ ನಿಸರ್ಗಪ್ರಿಯ, ಇಒ ಸತೀಶ್‌, ಸಿಡಿಪಿಒ ಅರುಣ್‌ಕುಮಾರ್‌, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್‌, ಬಿ.ಪ್ರಕಾಶ್‌, ಕೆಯುಐಡಿಬಿ ಮಾಜಿ ಅಧ್ಯಕ್ಷ ಮತ್ತಿಘಟ್ಟಕೃಷÜ್ಣಮೂರ್ತಿ, ಡಿಸಿಸಿ ಅಧ್ಯಕ್ಷ ಗಂಗಾಧರ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಬಿ.ಎಲ್‌.ದೇವರಾಜು, ಕಾಂಗ್ರೆಸ್‌ ಮುಖಂಡರಾದ ವಿಜಯ ರಾಮೇಗೌಡ, ಹರಳಹಳ್ಳಿ ವಿಶ್ವನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್‌, ಐಪನಹಳ್ಳಿ ನಾಗೇಂದ್ರ ಕುಮಾರ್‌ ಸೇರಿದಂತೆ ಹಲವರು ಇದ್ದರು.

Latest Videos
Follow Us:
Download App:
  • android
  • ios