Asianet Suvarna News Asianet Suvarna News

ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ: ಡಿಸಿಎಂ ಅಶ್ವತ್ಥನಾರಾಯಣ ಸಂತಾಪ

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಬಳ್ಳಾರಿ ಮೂಲದ ಶ್ಯಾಮ ಸುಂದರ್(70) ಅವರು ನಿಧನರಾಗಿದ್ದು, ಹಲವರು ಸಂತಾಪ ಸೂಚಿಸಿದ್ದಾರೆ.

senior English journalist shyam sundar passes away at Bellary rbj
Author
Bengaluru, First Published Oct 20, 2020, 4:44 PM IST

ಬಳ್ಳಾರಿ, (ಅ.20): ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಅವರು ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತ ಶ್ಯಾಮ ಸುಂದರ್ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಶ್ಯಾಮಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಫೆಬ್ರವರಿ ವೇಳೆ 65 ಕೋಟಿ ಭಾರತೀಯರಿಗೆ ಸೋಂಕು!

ಬಳ್ಳಾರಿಯ ಬಿಕೆಎಸ್ ಆಸ್ಪತ್ರೆಯಲ್ಲಿ ಅ.20ರ ಮಂಗಳವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.  ಶಾಮಸುಂದರ್ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಶ್ಯಾಮ್ ಸುಂದರ್ ಅವರ ನಿಧನಕ್ಕೆ  ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಸೇರಿದಂತೆ ಸಚಿವರು, ಶಾಸಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 ಅಶ್ವತ್ಥನಾರಾಯಣ ಸಂತಾಪದ ನುಡಿ
ದಿ ಹಿಂದು ಪತ್ರಿಕೆ ವರದಿಗಾರರಾಗಿ ಕಾರ್ಯನಿರ್ವಹಿಸಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಶ್ಯಾಮಸುಂದರ್ ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರೆಂಬ ಸುದ್ದಿ ಕೇಳಿ ಆಘಾತವಾಯಿತು. 

ಗುಣಮಟ್ಟದ ಪತ್ರಿಕೋದ್ಯಮ ಮತ್ತು ಗುಣಮಟ್ಟದ ಬರವಣಿಗೆಗೆ ಹೆಸರಾಗಿದ್ದ ಶ್ಯಾಮಸುಂದರ್‌ ಅವರು, ಮೇರು ವ್ಯಕ್ತಿತ್ವದ ಪತ್ರಕರ್ತರಾಗಿದ್ದರು. ಹೊಸ ತಲೆಮಾರಿನ ಪತ್ರಕರ್ತರಿಗೆ ಆಕರ ಗ್ರಂಥದಂತೆ ಇದ್ದರು. ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಮಿಡಿಯುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ನೋವು ಉಂಟು ಮಾಡಿದೆ.

ಶ್ರೀಯುತರ ಆತ್ಮಕ್ಕೆ ಚಿರಶಾಂತಿ‌ ಸಿಗಲಿ, ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಆ ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ,

Follow Us:
Download App:
  • android
  • ios