ಬೆಂಗಳೂರು (ಫೆ.17):  ಕನ್ನಡ ಸಾಹಿತ್ಯ ಪರಿಷತ್ತು ನೀಡುವ ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆ ವಿಶ್ವವಾಣಿ ಪತ್ರಿಕೆ ಸಂಪಾದಕರೂ ಆದ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಹಾಗೂ ಟಿ.ಗಿರಿಜಾ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಎಚ್‌.ಎಸ್‌.ಸುಜಾತಾ ಆಯ್ಕೆಯಾಗಿದ್ದಾರೆ. 

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಶ್ವೇಶ್ವರ ಭಟ್‌ ಮತ್ತು ಎಚ್‌.ಎಸ್‌.ಸುಜಾತಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಟಿ.ಗಿರಿಜಾ ಸಾಹಿತ್ಯ ಪ್ರಶಸ್ತಿ 15 ಸಾವಿರ ನಗದು ಮತ್ತು ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ 10 ಸಾವಿರ ನಗದು, ಸ್ಮರಣಿಕೆ, ಫಲ ತಾಂಬೂಲ ಒಳಗೊಂಡಿದೆ. 

ಸುಬ್ರಾಯ ಚೊಕ್ಕಾಡಿ ಸೇರಿ 6 ಮಂದಿಗೆ ಮಾಸ್ತಿ ಪ್ರಶಸ್ತಿ 2020

ಆಯ್ಕೆ ಸಮಿತಿ ಸಭೆಯಲ್ಲಿ ಸದಸ್ಯರಾದ ಅರುಂಧತಿ ರಮೇಶ್‌, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ, ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್‌ ಉಪಸ್ಥಿತರಿದ್ದರು.