Asianet Suvarna News Asianet Suvarna News

ಕೇರಳದಲ್ಲಿ ಸರಣಿ ಸ್ಫೋಟದ ಬೆನ್ನಲ್ಲೇ ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಸರಣಿ ಬಾಂಬ್‌ ಸ್ಫೋಟದ ಹಿನ್ನೆಲೆಯಲ್ಲೇ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಿ ತೀವ್ರ ನಿಗಾ ವಹಿಸಲಾಗಿದೆ. ನಗರದಲ್ಲಿ ಪೊಲೀಸರ ಗಸ್ತು ಹೆಚ್ಚಿಸಿದ್ದು, ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ಕಣ್ಣಿಡಲಾಗಿದೆ.

Serial blasts in Kerala: Police on high alert in Bengaluru city rav
Author
First Published Oct 30, 2023, 5:17 AM IST

ಬೆಂಗಳೂರು (ಅ. 30): ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಸರಣಿ ಬಾಂಬ್‌ ಸ್ಫೋಟದ ಹಿನ್ನೆಲೆಯಲ್ಲೇ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಿ ತೀವ್ರ ನಿಗಾ ವಹಿಸಲಾಗಿದೆ. ನಗರದಲ್ಲಿ ಪೊಲೀಸರ ಗಸ್ತು ಹೆಚ್ಚಿಸಿದ್ದು, ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ಕಣ್ಣಿಡಲಾಗಿದೆ.

ಬಸ್‌ ಹಾಗೂ ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಕಂಡು ಬರುವ ಪ್ರಯಾಣಿಕರು ಹಾಗೂ ಅವರ ಲಗೇಜುಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಿಧಾನಸೌಧ, ಹೈಕೋರ್ಟ್‌, ವಿಕಾಸಸೌಧ, ಬಹುಮಹಡಿ ಕಟ್ಟಡ, ಸಿಟಿ ಸಿವಿಲ್‌ ಕೋರ್ಟ್‌, ವಿಶ್ವೇಶ್ವರಯ್ಯ ಟವರ್‌ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಿ ನಿಗಾವಹಿಸಲಾಗಿದೆ.

ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!

ಕೇಂದ್ರದ ಗುಪ್ತಚರ ಸಂಸ್ಥೆಗಳ ಜತೆಗೆ ರಾಜ್ಯದ ಪೊಲೀಸ್‌ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ಕೇರಳ ಪೊಲೀಸರೊಂದಿಗೆ ರಾಜ್ಯದ ಪೊಲೀಸರು ಸಂಪರ್ಕ ಸಾಧಿಸಿ ಸ್ಫೋಟದ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳೂ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೇರಳ ಸ್ಫೋಟದ ಹೊಣೆಹೊತ್ತು ಪೊಲೀಸರಿಗೆ ಶರಣಾದ ಶಂಕಿತ, ಪ್ರಕರಣಕ್ಕೆ ಟ್ವಿಸ್ಟ್!

Follow Us:
Download App:
  • android
  • ios