ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಬೆಂಗಳೂರು (ಆ.22) : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರದ ಬಳಿ ಎಲಿವೇಟೆಡ್ ಪ್ಲೈ ಓವರ್ ಮೇಲೆ ನಡೆದಿರುವ ಘಟನೆ. ಬೊಲೇರೊ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಕ್ಯಾಂಟರ್ ಚಾಲಕ. ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್ ನಜ್ಜು ಗುಜ್ಜಾಗಿ ನಡುವೆ ಸಿಲುಕಿದ್ದ ಚಾಲಕ ಮನ್ಸೂರ್. ಘಟನೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕ್ಯಾಂಟರ್ ಚಾಲಕ ಮನ್ಸೂರು ಹಾಗು ಬೊಲೊರೋ ಪಿಕಪ್ ಚಾಲಕ ಹರೀಶ್ ಗೆ ಗಂಭೀರ ಗಾಯಗೊಂಡಿದ್ದು ಇಬ್ಬರನ್ನೂ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೂರು ಬೈಕ್‌ಗಳ ನಡುವೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸರಣಿ ಅಪಘಾತದಿಂದ ಫ್ಲೈಓವರ್ ಮೇಲೆ ಕೆಲಹೊತ್ತು ಸಂಚಾರ ದಟ್ಟಣೆ ಉಂಟಾಗಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಟ್ರಾಫಿಕ್ ಕ್ಲಿಯರೆನ್ಸ್ ಮಾಡಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು. ಸದ್ಯ ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ರೈಲ್ವೆ ಹಳಿಯಲ್ಲಿ ವಿದ್ಯಾರ್ಥಿ ಶವ ಪತ್ತೆ:
ಮೈಸೂರು: ಮೈಸೂರಿನ ಉನ್ನತಿನಗರದ ಬಡಾವಣೆಯ ರೈಲ್ವೆ ಹಳಿಯ ಸಮೀಪ ವಿದ್ಯಾರ್ಥಿಯೋರ್ವನ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಶಕ್ತಿನಗರದ ನಿವಾಸ ಹೃತ್ವಿಕ್(17) ಎಂದು ಗುರುತಿಸಲಾಗಿದೆ. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಹೃತ್ವಿಕ್.
ಚಿತ್ರದುರ್ಗದ ಬಳಿ ಭೀಕರ ದುರಂತ, ಒಂದೇ ಕುಟುಂಬದ ನಾಲ್ವರು ಸೇರಿ 5 ಬಲಿ, ಮೂವರು ಗಂಭೀರ
ಮಾಹಿತಿ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೃತಿಕ್ ರೈಲ್ವೆ ಹಳಿಗೆ ಸಿಲುಕಿ ಸಾವನ್ನಪ್ಪಿದ್ದಾರಾ? ಅಥವಾ ಕೊಲೆ ಮಾಡಿ ಬಿಸಾಡಲಾಗಿದೆಯಾ ಅನ್ನೋ ಬಗ್ಗೆ ಶಂಕೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು.
