Shakti scheme: 41 ಕೋಟಿ ಸ್ತ್ರೀಯರಿಂದ ಉಚಿತ ಬಸ್ ಪ್ರಯಾಣ: ಸಿದ್ದರಾಮಯ್ಯ

ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 41 ಕೋಟಿ ದಾಟಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕ ಸ್ವಾಲಂಬಿಗಳನ್ನಾಗಿಸಲು ಜಾರಿಗೆ ತರಲಾಗಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಆಮೂಲಕ ನಮ್ಮ ಉದ್ದೇಶ ಈಡೇರಿದೆ ಎಂದು ತಿಳಿಸಿದ್ದಾರೆ.

Shakti scheme Free bus travel by 41 crore women says cm siddaramaiah at bengaluru rav

ಬೆಂಗಳೂರು (ಆ.19) :  ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 41 ಕೋಟಿ ದಾಟಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕ ಸ್ವಾಲಂಬಿಗಳನ್ನಾಗಿಸಲು ಜಾರಿಗೆ ತರಲಾಗಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಆಮೂಲಕ ನಮ್ಮ ಉದ್ದೇಶ ಈಡೇರಿದೆ ಎಂದು ತಿಳಿಸಿದ್ದಾರೆ.

ಜೂನ್‌ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ ಪ್ರತಿನಿತ್ಯ ಸರಾಸರಿ 60 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದರು. ಅದರಂತೆ ಆಗಸ್ಟ್‌ 17ರವರೆಗೆ 41.33 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ.

40% ಕಮಿಷನ್ ಆರೋಪ; ನಾಗಮೋಹನ್‌ದಾಸ್‌ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ

ಶಕ್ತಿ ಯೋಜನೆಯ ಈ ಯಶಸ್ಸಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನೀರ್ವಹಣೆಯ ಉದ್ದೇಶಗಳಿಗಾಗಿ ನಾಡಿನ ಕೋಟ್ಯಂತರ ಮಹಿಳೆಯರು ಸಂಚರಿಸುತ್ತಿದ್ದಾರೆ. ಹೀಗೆ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ಶಕ್ತಿ ಯೋಜನೆ ಜಾರಿಗೆ ತಂದಿದ್ದೆವು. ಯೋಜನೆ ಜಾರಿಯಾದ ನಂತರದಿಂದ ಈವರೆಗೆ 40 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರಿದೆ. ಅದು ಸಂತಸವನ್ನುಂಟು ಮಾಡಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios