'ಶಕ್ತಿ' ಯೋಜನೆ ಲೋಕಾರ್ಪಣೆ, ಈ ಯೋಜನೆ ದೇಶಕ್ಕೇ ಮಾದರಿ : ಸತೀಶ್ ಜಾರಕಿಹೊಳಿ

ಮಹಿಳೆಯರ ಸಬಲೀಕರಣಕ್ಕಾಗಿ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಲಾಗಿದ್ದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ನುಡಿದಂತೆ ಇಂದು ರಾಜ್ಯದಾದ್ಯಂತ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಈ ಶಕ್ತಿ ಯೋಜನೆಯ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಹೇಳಿದರು. 

Shakti schme launched this schem is a model for the country says Satish Jarakiholi at belgum rav

ಬೆಳಗಾವಿ (ಜೂ.11) ಮಹಿಳೆಯರ ಸಬಲೀಕರಣಕ್ಕಾಗಿ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಲಾಗಿದ್ದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ನುಡಿದಂತೆ ಇಂದು ರಾಜ್ಯದಾದ್ಯಂತ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಈ ಶಕ್ತಿ ಯೋಜನೆಯ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಹೇಳಿದರು. 

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ವತಿಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ‘ಶಕ್ತಿ‘ ಯೋಜನೆಗೆ ಭಾನುವಾರ  ಚಾಲನೆ ನೀಡಿ ಮಾತನಾಡಿದರು. 

'ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್‌' ಪಡೆದ ಮೊದಲ ಮಹಿಳೆ ಇವರೇ! ಉಚಿತ ಪ್ರಯಾಣವನ್ನೂ ಮಾಡಿದ್ರು

ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು.  ಈ ದಿನ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲು. ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ದೊರಕಿದೆ. ಈ ಯೋಜನೆಯು ದೇಶಕ್ಕೆ ಮಾದರಿಯಾಗಲಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಐತಿಹಾಸಿಕ ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಪರವಿರೋಧ ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ಈ ಯೋಜನೆಯಿಂದ ಮಹಿಳಾ ಸಮುದಾಯಕ್ಕೆ ಆರ್ಥಿಕವಾಗಿ ಲಾಭವಾಗಲಿದೆ. 

ಪ್ರತಿದಿನ ಕೆಲಸಕ್ಕೆ ಹೋಗುವ ಮಹಿಖೆಯರು, ಸಣ್ಣಪುಟ್ಟ ಕೆಲಸಗಳಿಗೆ ದೈನಂದಿನ ಪ್ರಯಾಣ ಮಾಡುವರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂದರು. ಕರ್ನಾಟಕದ 'ಶಕ್ತಿ ಯೋಜನೆ' ಅಧಿಕೃತ ಆರಂಭ: ಮಹಿಳೆಯರಿಗೆ ಬಸ್‌ನಲ್ಲಿ ಫ್ರೀ ಟಿಕೆಟ್‌ ಶುರು

Latest Videos
Follow Us:
Download App:
  • android
  • ios