ಸತತ 3ನೇ ಬಾರಿಗೆ ವೀರಶೈವ ಮಹಾಸಭಾಅಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆ

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದು, ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

Shamanur Shivshankarappa elected as veerashaiva mahasabha president again rav

ಬೆಂಗಳೂರು (ಸೆ.16) ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದು, ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದುದರಿಂದ ಕಣದಲ್ಲಿ ಉಳಿದಿದ್ದ ಶಾಮನೂರು ಶಿವಶಂಕರಪ್ಪ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಬಿ.ದ್ಯಾಬೇರಿ ಅವರು ಭಾನುವಾರ ಘೋಷಿಸಿದ್ದಾರೆ. ಇದರಿಂದಾಗಿ ಶಾಮನೂರು ಶಿವಶಂಕರಪ್ಪ ಅವರು ಸತತ ಮೂರನೇ ಬಾರಿಯೂ ಗೆಲುವು ಸಾಧಿಸಿ ಮಹಾಸಭೆಯ ಆಡಳಿತ ಚುಕ್ಕಾಣಿ ಹಿಡಿದಂತಾಗಿದೆ.

 

ಜಾತಿ ಗಣತಿಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ, ನಾವು ಸುಮ್ಮನೆ ಕೂರಲ್ಲ ಎಂದ ಕೈ ನಾಯಕ

ಇತ್ತೀಚೆಗೆ ಮಹಾಸಭೆಯ ರಾಜ್ಯಾಧ್ಯಕ್ಷರಾಗಿ ಶಂಕರ ಬಿದರಿ ಆಯ್ಕೆಯಾಗಿದ್ದರು. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೆ.11 ಕೊನೆಯ ದಿನವಾಗಿತ್ತು. 12ರಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ನಾಮಪತ್ರ ವಾಪಸ್‌ ಪಡೆಯಲು ಸೆ.15 ಕೊನೆಯ ದಿನವಾಗಿತ್ತು. ಕಣದಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಇದ್ದಿದ್ದರೆ ಸೆ.29 ರಂದು ಚುನಾವಣೆ ನಡೆಯಬೇಕಿತ್ತು.

ಸಿಎಂ ಬಳಿ ನಾನು ಅತ್ತಿದ್ದೇನೆಂತೆ, ನಾವು ಸೆಡ್ಡು ಹೊಡೆಯೋರು: ಶಾಸಕ ಶಾಮನೂರು ಶಿವಶಂಕರಪ್ಪ

ಮಹಾಸಭಾದಲ್ಲಿ ಕೇರಳ, ಮಹಾರಾಷ್ಟ್ರ, ಆಂಧ್ರ ಸೇರಿದಂತೆ ಹಲವು ರಾಜ್ಯಗಳ ವೀರಶೈವ ಸಮುದಾಯದ ಸದಸ್ಯರು ಮತದಾನ ಹಕ್ಕು ಹೊಂದಿದ್ದಾರೆ. ಕರ್ನಾಟಕದಲ್ಲೇ ಸುಮಾರು 19 ಸಾವಿರ ಮತದಾರರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಸದಾಶಿವನಗರದ ಮಹಾ ಸಭೆಯ ಕೇಂದ್ರ ಕಚೇರಿಯಿಂದಲೇ ನಾಮಪತ್ರವನ್ನು ತೆಗೆದುಕೊಂಡು ಹೋಗಬೇಕಿತ್ತು. ಆದರೆ ಶಾಮನೂರು ಹೊರತು ಬೇರೆ ಯಾರೂ ನಾಮಪತ್ರ ಪಡೆದಿರಲಿಲ್ಲ. ಇದರಿಂದಾಗಿ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿತ್ತು.

Latest Videos
Follow Us:
Download App:
  • android
  • ios