ಜು.20ರ ವೇಳೆಗೆ ಶಿವಮೊಗ್ಗ ವಿಮಾನ ನಿಲ್ದಾಣ ಸಜ್ಜು ಆಗಸ್ಟ್‌ 11ರಿಂದ ವಿಮಾನ ಹಾರಾಟ: ಸಚಿವ ಎಂ.ಬಿ.ಪಾಟೀಲ

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್‌ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್‌ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಗುರುವಾರ ತಿಳಿಸಿದ್ದಾರೆ.

Shimoga Airport ready within july 20 says minister mb patil rav

 ಶಿವಮೊಗ್ಗ (ಜು.14) : ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್‌ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್‌ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಗುರುವಾರ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ(Shivamogga airport)ಕ್ಕೆ ಆಂಬುಲೆನ್ಸ್‌ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜು. 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.

Shivamogga airport: ತನಿಖೆಗೂ ಮುನ್ನ ವಿಮಾನ ಹಾರಾಟ ಆರಂಭಿಸಲಿ: ಕೆ.ಎಸ್‌.ಈಶ್ವರಪ್ಪ

ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ .12 ಲಕ್ಷ ಆದಾಯ ಬಂದಿದೆ. ಆ. 11ರಂದು ನಿಲ್ದಾಣ ಕಾರ್ಯಾರಂಭಗೊಳಲಿದ್ದು, ಅಂದು ಮೊದಲ ವಿಮಾನ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್‌ 11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜೈನಮುನಿ ಹತ್ಯೆ ಸಿಬಿಐ ತನಿಖೆಯಾಗ​ಲಿ: ಈಶ್ವರಪ್ಪ ಒತ್ತಾಯ

Latest Videos
Follow Us:
Download App:
  • android
  • ios