ವಾಲ್ಮೀಕಿ ನಿಗಮ ಹಗರಣ: ಸಮಗ್ರ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಹಣದ ಅಕ್ರಮ ವಹಿವಾಟಿನಲ್ಲಿ ಯೂನಿಯನ್ ಬ್ಯಾಂಕ್ ಪಾತ್ರದ ಕುರಿತು ಗಂಭೀರ ಆರೋಪಗಳಿವೆ. ಈ ಕುರಿತು ಈಗಾಗಲೇ ಸಿಬಿಐಗೆ ದೂರು ಸಲ್ಲಿಸಲಾಗಿದ್ದು, ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 

shobha karandlaje letter to amit shah to investigation about valmiki corporation scam grg

ಬೆಂಗಳೂರು(ಜು.13): ವಾಲ್ಮೀಕಿ ನಿಗಮದ ಹಗರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಹಗರಣವನ್ನು ಬೆಳಕಿಗೆ ತಂದ ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನೂ ಪತ್ರದಲ್ಲಿ ಕರಂದ್ಲಾಜೆ ಉಲ್ಲೇಖಿಸಿದ್ದು, ಪಾಲಿಕೆಗೆ ಸೇರಿದ 187 ಕೋಟಿ ರು. ಅನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಡೆತ್‌ನೋಟ್‌ನಲ್ಲಿ ಚಂದ್ರಶೇಖರನ್ ಆರೋಪಿಸಿದ್ದಾರೆ. ಇದರಲ್ಲಿ ಕೆಲವು ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್‌ನ ವಿವಿಧ ಖಾತೆಗಳಿಗೆ 88.62 ಕೋಟಿ ರು. ವರ್ಗಾವಣೆ ಆಗಿದೆ. ಈ ಹಗರಣದ ಬೆದರಿಕೆಯಿಂದಲೇ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು. ಈ ಬಗ್ಗೆ ಪಾರದರ್ಶಕ ಮತ್ತು ಸಂಪೂರ್ಣ ತನಿಖೆ ನಡೆಯಬೇಕು ಎಂದು ಶೋಭಾ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿ ರಾಜಕೀಯ ಪ್ರೇರಿತ ದಾಳಿ: ಪ್ರಿಯಾಂಕ್ ಖರ್ಗೆ ಕಿಡಿ

ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಹಣದ ಅಕ್ರಮ ವಹಿವಾಟಿನಲ್ಲಿ ಯೂನಿಯನ್ ಬ್ಯಾಂಕ್ ಪಾತ್ರದ ಕುರಿತು ಗಂಭೀರ ಆರೋಪಗಳಿವೆ. ಈ ಕುರಿತು ಈಗಾಗಲೇ ಸಿಬಿಐಗೆ ದೂರು ಸಲ್ಲಿಸಲಾಗಿದ್ದು, ತನಿಖೆ ನಡೆಸಬೇಕು ಎಂದು ಕರಂದ್ಲಾಜೆ ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios