ಮೋದಿ ಮತ್ತೆ ಪ್ರಧಾನಿಯಾಗಲೆಂದು ಚಾಮುಂಡಿ ಬೆಟ್ಟ ಹತ್ತಿದ ಶೋಭಾ

ಪ್ರತಿ ಬಾರಿಯಂತೆ ಈ ಬಾರಿಯ ಆಷಾಢ ಶುಕ್ರವಾರದಲ್ಲೂ ಚಾಮುಂಡಿ ಬೆಟ್ಟದ 1000 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆದಿರುವುದಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. 

shobha karandlaje visits chamundi hills through stairs gvd

ಮೈಸೂರು (ಜು.15): ಪ್ರತಿ ಬಾರಿಯಂತೆ ಈ ಬಾರಿಯ ಆಷಾಢ ಶುಕ್ರವಾರದಲ್ಲೂ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ದೇವರ ದರ್ಶನ ಪಡೆದಿರುವುದಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ತಾಯಿ ಚಾಮುಂಡೇಶ್ವರಿ ಮಹಿಷ ಮರ್ಧಿನಿ, ದುಷ್ಟರ ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿ ಕಾಪಾಡಬೇಕೆಂಬುದು ನಮ್ಮ ಕೋರಿಕೆ. ಪ್ರಧಾನಿ ನರೇಂದ್ರ ಮೋದಿ ಅವರು 9 ವರ್ಷ ಅಧಿಕಾರ ಪೂರೈಸಿದ್ದಾರೆ. ಮುಂದಿನ ವರ್ಷದ ಆಷಾಢ ಮಾಸ ಬರುವ ವೇಳೆಗೆ 3ನೇ ಬಾರಿ ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿ ಆಗಬೇಕು ಎಂಬುದು ನನ್ನ ಕೋರಿಕೆ ಎಂದರು

ಈ ದೇಶದ ರಕ್ಷಣೆ, ಅಭಿವೃದ್ಧಿಗೆ ಇಡೀ ಪ್ರಪಂಚದಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿಯಲು ನರೇಂದ್ರಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು ಎಂಬ ಕೋರಿಕೆಯೊಂದಿಗೆ ಚಾಮುಂಡಿ ಬೆಟ್ಟಹತ್ತುತ್ತಿದ್ದೇನೆ. ರಾಜ್ಯದಲ್ಲಿ ಇತ್ತೀಚೆಗೆ ಹಲವು ದುರ್ಘಟನೆಗಳು ನಡೆದಿವೆ. ಇವೆಲ್ಲವೂ ನಿವಾರಣೆ ಆಗಬೇಕು ಎಂದು ಅವರು ಹೇಳಿದರು. ಚಾಮುಂಡೇಶ್ವರಿ ತಾಯಿ ಭಕ್ತರಿಗೆ ರಕ್ಷಣೆ ಕೊಡಬೇಕು ಎಂಬುದು ನನ್ನ ಅಪೇಕ್ಷೆ.

ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಉಗ್ರರ ನಂಟು?

ಜೈನ ಮುನಿಗಳ ಹತ್ಯೆ, ಟಿ. ನರಸೀಪುದಲ್ಲಿ ನಮ್ಮದೇ ಯುವಕನ ಹತ್ಯೆಯ ಜೊತೆಗೆ ಬೆಂಗಳೂರಲ್ಲೂ ಹತ್ಯೆಗಳಾಗಿದ್ದು ಮನಸ್ಸಿಗೆ ತುಂಬಾ ದುಖಃವಾಗಿದೆ. ಮನುಷ್ಯರ ಜೀವಗಳನ್ನು ಬಲಿ ತೆಗೆದುಕೊಳ್ಳುವ ದುಷ್ಟಶಕ್ತಿಗಳು ತಲೆ ಎತ್ತುತ್ತಿವೆ. ತಾಯಿ ಚಾಮುಂಡೇಶ್ವರಿ ಇಂತಹ ದುಷ್ಟಶಕ್ತಿಗಳನ್ನು ಸಂಹಾರ ಮಾಡಬೇಕು ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಅವರು ಹೇಳಿದರು.

ಕಾಂಗ್ರೆಸ್‌ ನಾಯಕರ ಜೊತೆಗಿದ್ದ ಹುಡುಗರು ಕೊಲೆ ಮಾಡಿದ್ದಾರೆ: ಟಿ. ನರಸೀಪುರದಲ್ಲಿ ಹತ್ಯೆಯಾದ ನಮ್ಮ ಹಡುಗನನ್ನು ಕಾಂಗ್ರೆಸ್‌ ನಾಯಕರ ಜೊತೆಯಲ್ಲಿರುವವರು ಸಂಧಾನಕ್ಕೆ ಕರೆದು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯುವಕ ಹನುಮ ಜಯಂತಿ ಆಚರಿಸಿದ್ದ. ಕೇಸರಿ ಧ್ವಜ ಏರಿಸಿ ಹಿಂದುತ್ವದ ಕೆಲಸ ಮಾಡಿದ್ದ. ಆತನ ಹತ್ಯೆಯಾದ ಬಳಿಕ ಮೂವರು ಮಹಿಳೆಯರು ಮಾತ್ರ ಆ ಕುಟುಂಬದಲ್ಲಿ ಉಳಿದಿದ್ದಾರೆ. 

ಆತನ ತಾಯಿ, ಹೆಂಡತಿ, ಮಗಳು ಮಾತ್ರ ಉಳಿದಿದ್ದಾರೆ. ಅವರಿಗೆ ರಕ್ಷಣೆ ನೀಡುವವರು ಯಾರು ಎಂದು ಪ್ರಶ್ನಿಸಿದರು. ಇದರಿಂದ ಅವರಿಗೆ ಏನು ಲಾಭ ಸಿಕ್ಕಿತು? ಅವರಿಗೆ ಏನು ಒಳ್ಳೆಯದಾಯಿತು? ಆ ಕುಟುಂಬಕ್ಕೆ ಇನ್ಯಾರು ಧಿಕ್ಕು? ಶಾಸಕರು, ಮಂತ್ರಿಗಳು, ನಾಯಕರು ಬರುತ್ತಾರೆ. ಆದರೆ ಆ ತಾಯಿಯ, ಹೆಂಡತಿಯ, ಮಗಳ ದುಃಖ ಕೇಳೋರು ಯಾರು? ಕೊಲೆ ಮಾಡುವುದು ಒಂದು ನಿಮಿಷದ ಕೆಲಸ. ನಾವೆಲ್ಲರೂ ಒಂದು ವಿಚಾರದ ಪರವಾಗಿ ಕೆಲಸ ಮಾಡುತ್ತೇವೆ. 

ಆದರೆ ಒಂದು ವಿಚಾರವಾಗಿ ಕೆಲಸ ಮಾಡದಂತೆ ರಾಜ್ಯದಾದ್ಯಂತ ಭಯ ಹುಟ್ಟಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ದೂರಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಾರೆ. ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಾರೆಂದು ನಾವು ಹೇಳಿದ್ದೆವು. ಅದೇ ಕೆಲಸ ಈಗ ಆಗುತ್ತಿದೆ. ಆದರೂ ನಾವು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ. ವೇಣುಗೋಪಾಲ್‌ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

ಚೀಟಿ ಎತ್ತಿ ತಾತ್ಕಾಲಿಕ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿ: ಶೆಟ್ಟರ್‌

ದೇಶದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಒಂದೆಡೆ ವಿಪರೀತ ಮಳೆ ಆಗಿದ್ದರೆ, ಮತ್ತೊಂದು ಕಡೆ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಶೇ. 70 ಮಳೆ ಕೊರತೆಯಾಗಿದೆ. ಇದನ್ನು ಯಾವ ರೀತಿ ನಿಭಾಯಿಸಬೇಕು ಎಂದು ಚಿಂತನೆ ಮಾಡುತ್ತೇವೆ. ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ರೀತಿ ನಿಭಾಯಿಸಬೇಕು ಎಂದು ಯೋಚನೆ ಮಾಡುತ್ತೇವೆ. ಆರೋಪ, ಪ್ರತ್ಯಾರೋಪವನ್ನು ಬಿಟ್ಟು ಜನರ ಬದುಕನ್ನು ಉಳಿಸಲು ಪ್ರತಿಯೊಬ್ಬರೂ ಮುಂದಾಗಬೇಕಿದೆ. ಪಕ್ಷಾತೀತವಾಗಿ ಎಲ್ಲರೂ ಜನರ ರಕ್ಷಣೆಗೆ ಮುಂದಾಗಬೇಕು ಎಂದು ಅವರು ಹೇಳಿದರು.

Latest Videos
Follow Us:
Download App:
  • android
  • ios