ರಾಜ್ಯದಲ್ಲಿ 16,000 ವೈದ್ಯಕೀಯ ಸಿಬ್ಬಂದಿ ಕೊರತೆ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

Shortage of 16000 medical personnel in the state High Court Notice to Central and State Government rav

ಬೆಂಗಳೂರು  (ಜ.10): ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ(ಎಫ್‌ಐಸಿಸಿಐ) ನಡೆಸಿದ ಅಧ್ಯಯನದ ಆಧಾರದ ಮೇಲೆ ಪತ್ರಿಕೆ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

 

ದೇವರಾಯನದುರ್ಗದಲ್ಲಿ ಅರಣ್ಯ ಒತ್ತುವರಿ: ಹೈಕೋರ್ಟ್‌ ನೋಟಿಸ್‌

ಆರೋಗ್ಯ ಇಲಾಖೆಯ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಮೇಲಿನ ಬಜೆಟ್ ಹಂಚಿಕೆಯನ್ನು ಅನುಷ್ಠಾನಗೊಳಿಸುವ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪಿಐಎಲ್ ಕೋರಿದೆ.

"ಕರ್ನಾಟಕದಲ್ಲಿ ಆರೋಗ್ಯ ಸೇವೆಗಳು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟದಲ್ಲಿದ್ದು, ಸಾಂಕ್ರಾಮಿಕ ರೋಗಗಳ ಆತಂಕಕಾರಿ ಏರಿಕೆಯೊಂದಿಗೆ, ಕಡಿಮೆ ಸಿಬ್ಬಂದಿ ಮತ್ತು ರೋಗಿಗಳ ಹೆಚ್ಚಳವನ್ನು ನಿಭಾಯಿಸಲು ಆರೋಗ್ಯ ಇಲಾಖೆ ಅಸಮರ್ಥವಾಗಿದೆ” ಎಂದು ಪಿಐಎಲ್ ಹೇಳಿದೆ.

FICCI ಕಳೆದ ವರ್ಷ ಅಕ್ಟೋಬರ್ 11 ರಂದು ಕರ್ನಾಟಕದ ವಿಷನ್ 1 ಅಡಿ ಟ್ರಿಲಿಯನ್ ಆರ್ಥಿಕತೆ ವರದಿ ಬಿಡುಗಡೆ ಮಾಡಿತ್ತು. ಈ ವರದಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ಹೇಳಲಾಗಿದೆ. 

ದೇಗುಲಕ್ಕೆ ರಸ್ತೆ ಕೇಳಿದವನಿಗೆ ಹೈಕೋರ್ಟ್‌ ತರಾಟೆ..!

ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ದಾದಿಯರು, 1,517 ಲ್ಯಾಬ್ ತಂತ್ರಜ್ಞರು, 1,512 ಫಾರ್ಮಸಿಸ್ಟ್‌ಗಳು, 1,752 ಅಟೆಂಡೆಂಟ್‌ಗಳು ಮತ್ತು 3,253 ಗ್ರೂಪ್ ಡಿ ಸಿಬ್ಬಂದಿ ಕೊರತೆ ಇದೆ ಎಂದು ವರದಿ ಉಲ್ಲೇಖಿಸಿದೆ.

ಈ ವರದಿಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಪಿಐಎಲ್ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶನ ನೀಡಿತ್ತು

Latest Videos
Follow Us:
Download App:
  • android
  • ios