ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ತಮಕೂರು, (ಡಿ. 07): ನಡೆದಾಡುವ ದೇವರು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಕರೆದೊಯ್ಯಲು ನಿರ್ಧರಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು (ಗುರುವಾರ) ಚೆನ್ನೈನಿಂದ ಬಂದಿದ್ದ ನುರಿತ ವೈದ್ಯರು ಶ್ರೀಗಳ ಆರೋಗ್ಯ ತಪಾಸಣೆ ಮಾಡಿ ಮಠದಿಂದ ವಾಪಸ್ ಆಗಿದ್ದಾರೆ.

ಬಳಿಕ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರಿನ ಬಿ.ಜಿ.ಎಸ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಅವರು, ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಶ್ರೀಗಳ ಆರಾಮಾಗಿದ್ದಾರೆ. ಪದೇ-ಪದೇ ಸ್ಟಂಟ್ ನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಅವರನ್ನ ನಾಳೆ (ಡಿಸೆಂಬರ್ 7) ಚೆನ್ನೈಗೆ ಕರೆದೊಯ್ಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಬೆಂಗಳೂರಿನಿಂದ ವಿಮಾನದ ಮೂಲಕ ಚೆನ್ನೈ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದರು.

ಕಳೆದ ಎರಡು ದಿನಗಳಿಂದ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಇದ್ರಿಂದ ಶ್ರೀಗಳನ್ನ ಬಿ.ಜಿ. ಎಸ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.