ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದಂದು ಕೋಟೆ ಮಾರಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 77 ಈಡಗಾಯಿಗಳನ್ನು ದೇವಿಗೆ ಸಮರ್ಪಿಸಿ, ಯುವ ಕಾಂಗ್ರೆಸ್ ಹಾಗೂ ಅಭಿಮಾನಿ ಬಳಗದಿಂದ ಆಚರಣೆ ಮಾಡಲಾಯಿತು.
ಶಿವಮೊಗ್ಗ (ಆ.3) : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ 77 ಈಡಗಾಯಿಗಳನ್ನು ದೇವಿಗೆ ಸಮರ್ಪಿಸಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಪೂಜೆಯಲ್ಲಿ ಭಾಗವಹಿಸಿ, ಸಾಮಾಜಿಕ ನ್ಯಾಯವನ್ನೇ ಉಸಿರಾಗಿಸಿಕೊಂಡಿರುವ ಸಮಾಜವಾದಿ ನಾಯಕ, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕಿಗೆ ಭರವಸೆ ತುಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿ ಹಾಗೂ ಕೋಟೆ ಮಾರಿಕಾಂಬ ದೇವಿಯ ಆಶೀರ್ವಾದ ಸದಾ ಇರಲಿ ಎಂದು ಶುಭಾಶಯ ಕೋರಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಗಿರೀಶ್ ಹಾಗೂ ರಂಗನಾಥ್ ನೇತೃತ್ವದಲ್ಲಿ ನಡೆದ ಈ ವಿಶೇಷ ಪೂಜೆ ಮತ್ತು ಸಮರ್ಪಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
