ತಡರಾತ್ರಿ ಸಿದ್ದರಾಮಯ್ಯ ಮನೆಗೆ ಹೋಗಿದ್ದು ಬೆಳಗ್ಗೆ ಫುಡ್‌ ಪಾಯಿಸನ್‌ ಸಮಸ್ಯೆ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ವೈದ್ಯರಿಂದ ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಮೊರೆ ಹೋಗಿದ್ದರಿಂದ ಅಧಿವೇಶನಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಜೆಟ್‌ ಅಧಿವೇಶನವನ್ನು ಒಂದು ದಿನ ವಿಸ್ತರಿಸಿ ಮುಖ್ಯಮಂತ್ರಿಗಳಿಂದ ಸೋಮವಾರ ಉತ್ತರ ಕೊಡಿಸಲು ಉದ್ದೇಶಿಸಲಾಗಿದೆ. 

ಬೆಂಗಳೂರು(ಫೆ.24): ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳಿಗೆ ಗೈರು ಹಾಜರಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ 12 ಗಂಟೆವರೆಗೂ ವಿಧಾನಸೌಧದಲ್ಲೇ ಉಳಿದುಕೊಂಡು ಬಜೆಟ್‌ಗೆ ಉತ್ತರ ನೀಡಲು ಸಿದ್ಧತೆಯಲ್ಲಿ ತೊಡಗಿದ್ದರು. ಈ ವೇಳೆ ಊಟದ ಬದಲು ಸ್ನ್ಯಾಕ್ಸ್‌ ಮಾತ್ರ ತಿಂದಿದ್ದರು.

ಸಿದ್ದರಾಮಯ್ಯಗೆ ಸರ್ಕಾರ 5 ವರ್ಷ ನಡೆಯುತ್ತೆ ಅನ್ನೋದೆ ಖಾತ್ರಿಯಿಲ್ಲ: ಭಗವಂತ ಖೂಬಾ

ಬಳಿಕ ತಡರಾತ್ರಿ ಮನೆಗೆ ಹೋಗಿದ್ದು ಬೆಳಗ್ಗೆ ಫುಡ್‌ ಪಾಯಿಸನ್‌ ಸಮಸ್ಯೆ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ವೈದ್ಯರಿಂದ ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಮೊರೆ ಹೋಗಿದ್ದರಿಂದ ಅಧಿವೇಶನಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಜೆಟ್‌ ಅಧಿವೇಶನವನ್ನು ಒಂದು ದಿನ ವಿಸ್ತರಿಸಿ ಮುಖ್ಯಮಂತ್ರಿಗಳಿಂದ ಸೋಮವಾರ ಉತ್ತರ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.