ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ  ತೀವ್ರ ಜ್ವರ  ಮಣಿಪಾಲ್‌ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ ಎರಡೂ ಕೋವಿಡ್ ಪರೀಕ್ಷೆಯೂ ನೆಗೆಟಿವ್

ಬೆಂಗಳೂರು (ಜೂ.01): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೊರೋನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಮಂಗಳವಾರ ಆಸ್ಪತ್ರೆಗೆ ತೆರಳಿ ಪೂರ್ಣ ಪ್ರಮಾಣದ ತಪಾಸಣೆಗೆ ಒಳಗಾದರು. 

ಸಿದ್ದರಾಮಯ್ಯಗೆ ಅನಾರೋಗ್ಯ, ವೈದ್ಯರಿಂದ ತಪಾಸಣೆ ..

ಈ ವೇಳೆ ಎರಡನೇ ಬಾರಿ ನಡೆಸಿದ ಕೊರೋನಾ ಪರೀಕ್ಷೆಯಲ್ಲೂ ನೆಗೆಟಿವ್‌ ಬಂದಿದೆ. ಸಾಮಾನ್ಯ ವೈರಲ್‌ ಜ್ವರ ಬಾಧಿಸುತ್ತಿರುವುದಿಂದ ಅವರು ಎರಡು ದಿನಗಳ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. 

ಪ್ರಸ್ತುತ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದರಿಂದಾಗಿ ಮುಂದಿನ ಎರಡು ದಿನಗಳ ಅವಧಿ ವರೆಗೆ ಅವರ ಪೂರ್ವ ನಿಗದಿ ಕಾರ್ಯಕ್ರಮಗಳು ರದ್ದಾಗಿದೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.