ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಅವರನ್ನು ಮುಟ್ಟಿದರೆ ಸುಟ್ಟು ಹೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹಂಪಿ ಉತ್ಸವಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಜಯನಗರ (ಫೆ.26): ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಬೆಂಕಿ ಮಾತನ್ನಾಡಿದ್ದಾರೆ. ಸಿಎಂ ಸ್ಥಾನ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ, ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯವೇನ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಥಬ್ಸ್‌ಅಪ್ ಕೊಟ್ಟು ಜಮೀರ್ ಹೇಳಿದ್ದಾರೆ.
ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ.ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡದ್ರೆ, ನಾವು ಅಭಿಪ್ರಾಯ ತಿಳಿಸಬಹುದು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಎಂದು ಹೇಳಿಲ್ಲ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತದೆ.ದಲಿತ, ಅಲ್ಪಸಂಖ್ಯಾತ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಪರಮೇಶ್ವರ್ ರಾಜೀನಾಮೆ ವಿಚಾರಕ್ಕೆ ಮಾತನಾಡಿದ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಹೈಕಮಾಂಡ್ ಆದೇಶಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ. ಹಂಪಿ ಉತ್ಸವದ ಸಿದ್ದತೆ ಪರಿಶೀಲನೆ ನಡೆಸಿದ ಸಚಿವ ಜಮೀರ್,'ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯನವರು ಬರ್ತಾರೆ. ಸಚಿವ ಸಂಪುಟದ ಸಹೋದ್ಯೋಗಿಗಳು ಕೂಡ ಬರ್ತಾರೆ. ಉಪೇಂದ್ರ, ರಮೇಶ್ ಅರವಿಂದ್, ರಮ್ಯ, ದಿಗಂತ, ತರುಣ್ ಕಿಶೋರ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವರು ಬರ್ತಾರೆ. ಮೂರು ದಿನಗಳ ಉತ್ಸವದಲ್ಲಿ 10 ಲಕ್ಷಕ್ಕೂ ಜನರು ಬರೋ ಸಾಧ್ಯತೆ ಇದೆ. ಬರುವ ಜನರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ಬಾರಿಗಿಂತ ಅದ್ದೂರಿ ಉತ್ಸವ ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಲ್ಲಾನೇ ಹರಾಮಿ ಆಸ್ತಿ ತಗೋಬಾರ್ದು ಅಂದಿದ್ದಾರೆ; ಆದ್ರೆ ಜಮೀರ್ ಇಸ್ಲಾಂ ಧರ್ಮ ಕೆಡಿಸ್ತಾನೆ; ಅಯೂಫ್!
ಫೆ 28 ಮಾರ್ಚ್ 1 ಮತ್ತು 2 ರಂದು ಹಂಪಿ ಉತ್ಸವ ನಡೆಯಲಿದ್ದು, ಮುಖ್ಯ ವೇದಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ವೀಕ್ಷಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಗೆ ಈ ವೇಳೆ ಶಾಸಕ ಎಚ್ ಆರ್ ಗವಿಯಪ್ಪ, ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಸಾಥ್ ನೀಡಿದ್ದಾರೆ. ಹಂಪಿಯ ಗಾಯತ್ರಿ ಪೀಠದಲ್ಲಿ ಮುಖ್ಯ ವೇದಿಕೆ ನಿರ್ಮಾಣಗೊಂಡಿದೆ. ಮಾಜಿ ಡಿಸಿಎಂ ದಿವಂಗತ ಎಂಪಿ ಪ್ರಕಾಶ್ ಹೆಸರಿನ ವೇದಿಕೆ ನಿರ್ಮಾಣವಾಗಿದೆ.
ಕುಮಾರಸ್ವಾಮಿಗೆ 'ಕರಿಯ..' ಎಂದ ಜಮೀರ್, ಜನಾಂಗೀಯ ದ್ವೇಷದ ಮಾತಿಗೆ ಜೆಡಿಎಸ್ ಆಕ್ರೋಶ!
