ಸಿದ್ದುಗೆ ಮತ್ತೆ ಮುಖ್ಯಮಂತ್ರಿ ಆಗುವ ಕನಸು: ರಾಮುಲು| ಹತಾಶರಾಗಿ ಮಾಜಿ ಸಿಎಂರಿಂದ ಸರ್ಕಾರದ ಬಗ್ಗೆ ಟೀಕೆ

ಚಿತ್ರದುರ್ಗ[ಅ.14]:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.

Add Asianetnews Kannada as a Preferred SourcegooglePreferred

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೈಗೊಂಡಿದೆ. ಸರ್ಕಾರದ ಕಾರ್ಯ ವೈಖರಿ ನೋಡಿ ಹತಾಶ ರಾಗಿರುವ ಸಿದ್ದರಾಮಯ್ಯ ಮತ್ತೆ ಅಧಿಕಾರ ಪಡೆಯುವ ಸಲುವಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮಾತಿಗೆ ಗೌರವ ಕೊಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಧ್ಯಮಗಳ ನಿರ್ಬಂಧ ವಿಚಾರದಲ್ಲಿ ಸ್ಪೀಕರ್ ನಿರ್ಧಾರ ಪ್ರಶ್ನಿಸುವ ಹಕ್ಕು ನಮಗಿಲ್ಲ ಎಂದರು.

ಪರಂ ಪಿಎ ಆತ್ಮ ಹತ್ಯೆಗೂ ಐಟಿಗೂ ಸಂಬಂಧವಿಲ್ಲ

ಚಿತ್ರದುರ್ಗ/ಬಳ್ಳಾರಿ: ಮಾಜಿ ಉಪಮುಖ್ಯ ಮಂತ್ರಿ ಜಿ.ಪರಮೇಶ್ವರ್ ಅವರ ಪಿಎ ರಮೇಶ್ ಆತ್ಮಹತ್ಯೆ ಪ್ರಕ ರಣಕ್ಕೂ ತೆರಿಗೆ ದಾಳಿಗೂ ಬಿಜೆ ಪಿಗೂ ಯಾವುದೇ ಸಂಬಂಧ ವಿಲ್ಲ. ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿವೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಸುದ್ದಿಗಾರರ ಜತೆ ಮಾತ ನಾಡಿದ ಅವರು, ತೆರಿಗೆ ದಾಳಿ ವಿಚಾರಗಳನ್ನು ರಾಜಕೀಯವಾಗಿ ಥಳಕು ಹಾಕುವುದು ಸರಿಯಲ್ಲ. ಬಿಜೆಪಿಯ ಕೇಂದ್ರ ಸಚಿವ ಸಿದ್ದೇಶ್ವರ ಅವರ ಮನೆ ಮೇಲೆ ಸಹ ದಾಳಿಯಾಗಿತ್ತು ಎಂಬುದನ್ನು ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುವವರು ನೆನಪು ಮಾಡಿಕೊಳ್ಳಬೇಕು ಎಂದರು.