ಕೊರೋನಾದಿಂದ ಗುಣಮುಖರಾದವರಿಗೆ ವಿಶೇಷ ಮನವಿ ಮಾಡಿಕೊಂಡ ಸಿದ್ದರಾಮಯ್ಯ
ಕೊರೋನಾ ಸೋಂಕಿನಿಂದ ಗುಣಮುಖರಾದವರು ರಕ್ತ ನೀಡುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಂಗಳೂರು, (ಜುಲೈ,01): ಕೊರೋನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಸಿದ್ದರಾಮಯ್ಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರು, ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ. ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸಬೇಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.
ಹುಬ್ಬಳ್ಳಿ: ರಾಜ್ಯದಲ್ಲಿ ಪ್ಲಾಸ್ಮಾ ಚಿಕಿತ್ಸೆ ಸಕ್ಸಕ್, ಕೊರೋನಾ ರೋಗಿ ಡಿಸ್ಚಾರ್ಜ್
ಕೋವಿಡ್‌ನಿಂದ ಗುಣಮುಖನಾದ ವ್ಯಕ್ತಿಯು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ 28 ದಿನಗಳ ಬಳಿಕ ಅಥವಾ ರೋಗಿಯ ಪ್ರತ್ಯೇಕವಾಸ ಮುಗಿದು 28 ದಿನಗಳ ಬಳಿಕವಷ್ಟೇ ಪ್ಲಾಸ್ಮಾ ಸಂಗ್ರಹಕ್ಕೆ ಅವಕಾಶ ಇದೆ.
ಇನ್ನು ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕಿತನನ್ನು ಪ್ಲಾಸ್ಮಾ ಥೆರಪಿ ಮೂಲಕ ಗುಣಪಡಿಸಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು.
ಪ್ಲಾಸ್ಮಾ ದಾನ ಎಂದ ಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್
ನಾನು ಪ್ಲಾಸ್ಮಾದಿಂದ ಮರು ಜೀವ ಪಡೆದಿದ್ದೇನೆ. ಹೀಗಾಗಿ ಎಲ್ಲ ಕೊರೋನಾ ಸೋಂಕಿತರು ಗುಣಮುಖರಾದ ನಂತರ ಪ್ಲಾಸ್ಮಾ ದಾನ ಮಾಡಬೇಕು. ನಾನೂ ಕೂಡ ನನ್ನ ಪ್ಲಾಸ್ಮಾ ದಾನ ಮಾಡಿದ್ದೇನೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೊರೋನಾ ಸೋಂಕಿಗೆ ಒಳಗಾಗಿ ಅಪಾಯದ ಹಂತ ತಲುಪಿದ್ದ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇದೀಗ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಕುರಿತು ತಮ್ಮ ಅನುಭವ ಹಂಚಿಕೊಂಡ ಅವರು, ಪ್ರಾಣಾಪಾಯದ ಸ್ಥಿತಿಗೆ ತಲುಪಿದ್ದ ನಾನು ಪ್ಲಾಸ್ಮಾ ಥೆರಪಿಯಿಂದ ಬದುಕುಳಿದಿದ್ದೇನೆ ಎಂದಿದ್ದಾರೆ.