ಬೆಂಗಳೂರು (ಫೆ.27):  ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆ ಮೈತ್ರಿಯ ಬೆನ್ನಲ್ಲೇ ಸಿದ್ದರಾಮಯ್ಯ ಎರಡು ದಿನಗಳ ವಿಶ್ರಾಂತಿಗೆ ತೆರಳಿದ್ದಾರೆ. ಮಾಜಿ ಸಚಿವ ಕೆ.ಜೆ. ಜಾಜ್‌ರ್‍ ಅವರ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಶನಿವಾರ ಸಂಜೆ ಸುರ್ಜೇವಾಲಾ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಗೆ ಸಿದ್ದರಾಮಯ್ಯ

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ನಡೆಯಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಪುತ್ರ ಅರ್ಜುನ್‌ ಸುರ್ಜೇವಾಲಾ ಅವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ದೆಹಲಿಗೆ ತೆರಳಲಿದ್ದಾರೆ.

ಸಿದ್ದರಾಮಯ್ಯಗೆ ಆಹ್ವಾನಿಸಿದ BJP ಶಾಸಕ : 10 ಎಕರೆ ಜಮೀನು ನೀಡುವುದಾಗಿ ಹೇಳಿಕೆ .

ಭಾನುವಾರವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪುತ್ರಿಯ ವಿವಾಹದ ಬೀಗರೂಟ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಅವರು ಮಾ.7 ರಂದು ಹರಿಯಾಣದಲ್ಲಿ ನಡೆಯಲಿರುವ ಸುರ್ಜೇವಾಲಾ ಪುತ್ರನ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ರಾಜ್ಯದ ಇಬ್ಬರೂ ನಾಯಕರು ಪ್ರತ್ಯೇಕವಾಗಿಯೇ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.