ನಿಮಗೆ ತಾಕತ್ ಇದ್ರೆ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ: ಮೋದಿಗೆ ಸಿದ್ದು ಸವಾಲ್
* ಕಾಂಗ್ರೆಸ್‌ನ್ನು ಶೇ.10 ಎಂದಿದ್ದ ಮೋದಿ ಈಗ ಶೇ.40 ಸರ್ಕಾರದ ತನಿಖೆ ಮಾಡಲಿ
* ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸು ದಾಖಲಿಸಬೇಕು
* ಕೂಡಲೇ ಈಶ್ವರಪ್ಪನನ್ನು ಬಂಧಿಸಿ ಒಳಗೆ ಹಾಕಬೇಕು
ಚಾಮರಾಜನಗರ(ಏ.20): ಆಧಾರ ರಹಿತವಾಗಿ ನನ್ನ ಸರ್ಕಾರವನ್ನು ಅಂದು ಪ್ರಧಾನಿ ನರೇಂದ್ರ ಮೋದಿ(Narendra Modi) 10% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗ ಈ ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘವೇ ಪ್ರಧಾನಿಗೆ 8 ತಿಂಗಳ ಹಿಂದೆ ಪತ್ರ ಬರೆದಿದೆ, ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸವಾಲು ಹಾಕಿದರು.
ಈಶ್ವರಪ್ಪ(KS Eshwarappa) ಬಂಧನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ(Protest) ಮಾತನಾಡಿದ ಅವರು, ಎಲ್ಲಾ ಏಜೆನ್ಸಿಗಳು ಅವರ ಬಳಿಯೇ ಇದೆಯಲ್ಲಾ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕಿಡಿಕಾರಿದರು. ಸ್ವಪಕ್ಷದ ಕಾರ್ಯಕರ್ತನಿಂದ ಕಾಮಗಾರಿ ಮಾಡಿಸಿ ಬಳಿಕ 40% ಕಮಿಷನ್‌ಗಾಗಿ ಗುತ್ತಿಗೆದಾರನನ್ನು ಈಶ್ವರಪ್ಪ ಬಲಿ ಪಡೆದಿದ್ದಾರೆ. ಬಡವನ ಹಣಕ್ಕೆ ಕತ್ತರಿ ಹಾಕಿರುವ ಈಶ್ವರಪ್ಪ ಮನುಷ್ಯನಾ, ರಾಕ್ಷಸನಾ, ಆತನನ್ನು ಕೊಲೆಗಡುಕ ಅನ್ನದೇ ಏನನ್ನಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಭಾಷಣದಲ್ಲಿ ಸಿ.ಟಿ ರವಿ ಸಂಬಂಧಿ ಹೆಸ್ರು ಪ್ರಸ್ತಾಪಿಸಿದ ಸಿದ್ದರಾಮಯ್ಯ
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸು ದಾಖಲಿಸಬೇಕು, ಕೂಡಲೇ ಈಶ್ವರಪ್ಪನನ್ನು ಬಂಧಿಸಿ ಒಳಗೆ ಹಾಕಬೇಕು, ಮೃತ ಗುತ್ತಿಗೆದಾರನ ಪತ್ನಿಗೆ ಸರ್ಕಾರಿ ನೌಕರಿ, ಒಂದು ಕೋಟಿ ರು. ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.
ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಸಿಎಂಗೆ ಸಿದ್ದು ಗುದ್ದು..!
ಬಾಗಲಕೋಟೆ: ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ ಎಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಕೇಳಿಬಂದಿದೆ.
ಡಿಕೆಶಿ ಬಗ್ಗೆ ಬೇಗ ಎಚ್ಚೆತ್ತುಕೊಳ್ಳಿ, ನಿಮಗೂ ಖೆಡ್ಡಾ ತೋಡ್ಬಹುದು: ಸಿದ್ದುಗೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ
ಹೌದು...ಗುತ್ತಿಗೆದಾರರು 40% ಕಮಿಷನ್(40% Commission) ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಕಾಂಗ್ರೆಸ್ ನಾಯಕರು ಸಹ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಸಿಎಂ ಬೊಮ್ಮಾಯಿ ಪ್ರಕ್ರಿಯಿಸಿ ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರದ(Corruption) ಹಗರಣಗಳನ್ನ ಜನತೆ ಮುಂದಿಡುತ್ತೇವೆ ಎಂದಿದ್ದರು.
ಇದಕ್ಕೆ ಕಿಡಿಕಾರಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಸವಾಲು ಹಾಕಿದ್ದರು.