ಬೆಂಗಳೂರು(ಮಾ.29):  ಬಿಜೆಪಿ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು? ಕೆಪಿಸಿಸಿ ಅಧ್ಯಕ್ಷರಿಗೆ ರಕ್ಷಣೆ ನೀಡದ ಬೆಳಗಾವಿ ಪೊಲೀಸರ ‘ಮೂಕ ನಾಟಕ’. ಪೊಲೀಸರ ಮೇಲೆ ನಂಬಿಕೆಯಿಲ್ಲ ಎಂಬ ಸಿ.ಡಿ. ಪ್ರಕರಣದ ಸಂತ್ರಸ್ತೆಯ ಹೇಳಿಕೆ ಸಮರ್ಥಿಸುವಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ ಎಂದು ಕಿಡಿ ಕಾರಿದ್ದಾರೆ.

ಸಿ.ಡಿ.ಕೇಸ್: ಬೆಳಗಾವಿಯಲ್ಲಿ ಹೈಡ್ರಾಮಾ, ರಮೇಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ

ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.