Asianet Suvarna News Asianet Suvarna News

ಸೋನಿಯಾ ಎಚ್ಚರಿಸಿದ್ದರಿಂದ ವೈದ್ಯ ಮೀಸಲು ಕೊಟ್ಟ ಮೋದಿ: ಸಿದ್ದು

*  ಬಿಜೆಪಿಗರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ
*  ನಮ್ಮದು ಬದ್ಧತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ 
*  ಬಿಜೆಪಿಯು ಬಡವರ, ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವುದು ನನಗೆ ಗೊತ್ತಿದೆ

Siddaramaiah Talks Over Reservation to OBC Students grg
Author
Bengaluru, First Published Jul 31, 2021, 7:25 AM IST
  • Facebook
  • Twitter
  • Whatsapp

ಬೆಂಗಳೂರು(ಜು.31): ಇತರ ಹಿಂದುಳಿದ ವರ್ಗದ (ಒಬಿಸಿ) ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗಳಲ್ಲಿ ಶೇ.27 ಮೀಸಲಾತಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಪತ್ರವನ್ನು ಪರಿಗಣಿಸಿ ಮೀಸಲಾತಿ ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ ಮೀಸಲಾತಿ ಬಗ್ಗೆ ಟೀಕಿಸಿದ್ದ ಬಿಜೆಪಿಗರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ರಾಜಕೀಯ ಅನಿವಾರ್ಯತೆಗೆ ಸಿಲುಕಿ ಮೀಸಲಾತಿ ನೀಡಲಾಗಿದೆ. ನಮ್ಮದು ಬದ್ಧತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ ಎಂದು ತಿರುಗೇಟು ನೀಡಿದ್ದಾರೆ. 

ವೈದ್ಯಕೀಯ ಶಿಕ್ಷಣದಲ್ಲಿ ಐತಿಹಾಸಿಕ ನಿರ್ಧಾರ; OBCಗೆ ಶೇ. 27, ಆರ್ಥಿಕ ದುರ್ಬಲರಿಗೆ ಶೇ.10 ಮೀಸಲಾತಿ!

ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ‘10 ವರ್ಷ ಯುಪಿಎ ಸರ್ಕಾರವಿದ್ದಾಗ ಒಬಿಸಿ ಮೀಸಲು ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಜ್ಞಾನ ಇರಲಿಲ್ಲವೇ’ ಎಂದು ಪ್ರಶ್ನಿಸಿದೆ. ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿಯು ಬಡವರ, ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವುದು ನನಗೆ ಗೊತ್ತಿದೆ. ಆದರೆ ಇಷ್ಟೊಂದು ಬೌದ್ಧಿಕ ದಿವಾಳಿತನದಿಂದ ಬಳಲುತ್ತಿದೆ ಎಂದು ಗೊತ್ತಿರಲಿಲ್ಲ. ಇತ್ತೀಚಿನ ಇತಿಹಾಸವನ್ನಾದರೂ ಓದಿಕೊಂಡು ಪ್ರತಿಕ್ರಿಯಿಸಿ ಎಂದು ಹೇಳಿದ್ದಾರೆ.
 

Follow Us:
Download App:
  • android
  • ios