ಮಡಿಕೇರಿ ಶಾಲೆಯಲ್ಲಿ ಯುವಜನರಿಗೆ ಶಸ್ತ್ರ ತರಬೇತಿ ನೀಡಿ ಬಜರಂಗದಳ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದ್ದರೆ ಕೂಡಲೇ ಬಜರಂಗದಳ ನಾಯಕರನ್ನು ಬಂಧಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರು (ಮೇ.17): ಮಡಿಕೇರಿ (Madikeri) ಶಾಲೆಯಲ್ಲಿ ಯುವಜನರಿಗೆ ಶಸ್ತ್ರ ತರಬೇತಿ (Arms Training) ನೀಡಿ ಬಜರಂಗದಳ (Bajrang Dal) ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದ್ದರೆ ಕೂಡಲೇ ಬಜರಂಗದಳ ನಾಯಕರನ್ನು ಬಂಧಿಸಬೇಕು (Arrest) ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ ಎಂಬ ಪ್ರಶ್ನೆಯನ್ನು ಈ ಘಟನೆ ಹುಟ್ಟಿಸಿದೆ ಎಂದಿದ್ದಾರೆ.
ಬಜರಂಗದಳ ನಡೆಸಿರುವ ಕಾನೂನುಬಾಹಿರ ಕಾರ್ಯಕ್ರಮದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಹಾಗೂ ಸುಜ ಕುಶಾಲಪ್ಪ ಭಾಗವಹಿಸಿದ್ದಾರೆ. ಇವರ ಬದ್ಧತೆ ಇರುವುದು ಸಂವಿಧಾನಕ್ಕೋ ಅಥವಾ ಬಜರಂಗದಳಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ. ಶಸ್ತ್ರಾಸ್ತ್ರ ತರಬೇತಿ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಬಜರಂಗದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.
ಸಿದ್ದರಾಮಯ್ಯ ಸರ್ಕಾರದ ದಿಂಬು, ಹಾಸಿಗೆ ಹಗರಣ ಮುಚ್ಚಿ ಹಾಕಲಿಲ್ವಾ?: ಸಿದ್ದು ವಿರುದ್ಧ ಎಸ್‌ಟಿಎಸ್ ಗರಂ
ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮಸೇನೆ, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಿಬೇಕು. ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು ಬಿಜೆಪಿ ಸರ್ಕಾರ ಬಜರಂಗದಳ, ಶ್ರೀರಾಮ ಸೇನೆಯಂತಹ ಕೋಮುವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ ಎಂದು ಕಿಡಿ ಕಾರಿದ್ದಾರೆ.
ಜಾತಿ ಗಣತಿ ಆಧರಿಸಿ ಒಬಿಸಿ ಮೀಸಲು ಕೊಡಿ: ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆಗೆ ಕಾಯದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯೊಂದೇ ಪರಿಹಾರವಾಗಿದ್ದು, ಈ ವರದಿ ಆಧಾರದ ಮೇಲೆ ಒಬಿಸಿ ಮೀಸಲಾತಿ ರೂಪಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಅದರ ಆಧಾರದ ಮೇಲೆಯೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
Mandya: ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಿವೆ: ಸಂಸದ ಪ್ರತಾಪ್ ಸಿಂಹ ಟೀಕೆ!
ಸುಪ್ರೀಂ ಕೋರ್ಟ್ ಆದೇಶದಿಂದ ಹಿಂದುಳಿದ ವರ್ಗಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಕಾನೂನು ಹೋರಾಟಕ್ಕೆ ತಯಾರಾಗಬೇಕು. ಪರಿಸ್ಥಿತಿ ಕೈ ಮೀರಿ ಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ.
