ಬೆಂಗಳೂರು(ಆ.13):  ಕೋವಿಡ್‌ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಪೂರ್ಣ ಚೇತರಿಸಿಕೊಂಡಿದ್ದು ಇಂದು(ಗುರುವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

"

ಸೋಂಕು ಹಿನ್ನೆಲೆಯಲ್ಲಿ ಆ.4ರಂದು ಸಿದ್ದರಾಮಯ್ಯ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದಲ್ಲಿ ಅವರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಭಾನುವಾರ ಜ್ವರದಿಂದ ಸಂಪೂರ್ಣ ಗುಣಮುಖರಾಗಿದ್ದರು. ಸೋಮವಾರ ಮತ್ತು ಮಂಗಳವಾರ ನಡೆಸಿದ ಕೋವಿಡ್‌ ಪರೀಕ್ಷೆಯ ಫಲಿತಾಂಶ ನಿನ್ನೆ(ಬುಧವಾರ) ಬಂದಿದ್ದು, ಎರಡು ಪರೀಕ್ಷೆಗಳಲ್ಲೂ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಒಂದೆರಡು ದಿನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಸಾಧ್ಯತೆ

ಶಾಸಕ ಯತೀಂದ್ರ ಚೇತರಿಕೆ:

ಕೋವಿಡ್‌ ಸೋಂಕಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಮತ್ತಷ್ಟುಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಜ್ವರ ಹಾಗೂ ಸುಸ್ತಿನಿಂದ ಬಳಲುತ್ತಿದ್ದ ಅವರಿಗೆ ಈಗ ಯಾವುದೇ ಲಕ್ಷಣಗಳಿಲ್ಲ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಇನ್ನೂ ಕೆಲ ದಿನಗಳ ಕಾಲ ಚಿಕಿತ್ಸೆ ಮುಂದುವರೆಯಲಿದ್ದು, ಬಳಿಕ ಮತ್ತೆ ಕೋವಿಡ್‌ ಪರೀಕ್ಷೆ ನಡೆಸಿ ನೆಗೆಟಿವ್‌ ವರದಿ ಬಂದರೆ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.